ಉಡುಪಿ, ಜು.28 (DaijiworldNews/SM): ಜಿಲ್ಲೆಯಲ್ಲಿ ಮಂಗಳವಾರದಂದು ಮತ್ತೆ 109 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೊಂಕಿತರ ಸಂಖ್ಯೆ 3722 ಕ್ಕೆ ಏರಿಕೆಯಾಗಿದೆ.
ಉಡುಪಿಯಲ್ಲಿ 1461 ಸದ್ಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ 2239 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿರುವ ಬಗ್ಗೆ ಜಿಲ್ಲಾಡಳಿತ ಮಾಹಿತಿ ನೀಡಿದೆ. ಮಂಗಳವಾರದಂದು 422 ಮಂದಿಯ ವರದಿ ನೆಗೆಟಿವ್ ಆಗಿದೆ. ಉಳಿದಂತೆ 671 ವರದಿ ನಿರೀಕ್ಷಿಸಲಾಗಿದೆ.
ಜಿಲ್ಲೆಯಲ್ಲಿ ಈವರೆಗೆ ಕೊವಿಡ್ ನಿಂದಾಗಿ 22 ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಈ ಪೈಕಿ ಒಬ್ಬರು ಮಾತ್ರವೇ ಇತರ ರೋಗಗಳಿಲ್ಲದೆ ಸಂಪೂರ್ಣ ಕೋವಿಡ್ ಲಕ್ಷಣಗಳಿಂದಾಗಿಯೇ ಮೃತಪಟ್ಟಿದ್ದಾರೆ.