ಉಡುಪಿ, ಜು 30 (Daijiworld News/MSP): ಉಡುಪಿ ಜಿಲ್ಲೆಯಲ್ಲೂ ಸಿಇಟಿ ಪರೀಕ್ಷೆಗಳು ಆರಂಭವಾಗಿವೆ. ಉಡುಪಿ ಜಿಲ್ಲೆಯ ಸುಮಾರು 10 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 3915 ಪರೀಕ್ಷಾರ್ಥಿಗಳು ಪರೀಕ್ಷೆಯನ್ನು ಬರೆಯಲು ನೊಂದಣೆ ಮಾಡಿಕೊಂಡಿದ್ದಾರೆ. ಎಲ್ಲಾ ಪರೀಕ್ಷಾರ್ಥಿಗಳಿಗೆ ಸೊಂಕು ಲಕ್ಷಣಗಳು ಇವೆಯೇ ಎಂದು ಪರೀಕ್ಷಿಸಿ ಪರೀಕ್ಷಾ ಕೇಂದ್ರದ ಒಳಗಡೆ ಬಿಡಲಾಗುತ್ತಿದೆ.
ಪರೀಕ್ಷಾ ಕೆಂದ್ರದ ಸುತ್ತ ಬಿಗಿ ಪೋಲಿಸ್ ಬಂದೋಬಸ್ತ್ ಅನ್ನು ಕೂಡಾ ಮಾಡಲಾಗಿದೆ. ವಿದ್ಯಾರ್ಥಿಗಳನ್ನು ಮತ್ತು ಅಧ್ಯಾಪಕರನ್ನು ಥರ್ಮಲ್ ಸ್ಕ್ಯಾನರ್ ಮೂಲಕ ತಪಾಸಣೆ ನಡೆಸಿ ಕೇಂದ್ರದ ಒಳಗೆ ಪ್ರವೇಶ ನೀಡಲಾಗುತ್ತಿದೆ.
ಇನ್ನು ಕೋವಿಡ್ ಸೊಂಕು ಇರುವ ವಿದ್ಯಾರ್ಥಿಗಳಿಗೆ ಕೂಡಾ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ್ದು ಅವರಿಗಾಗಿ ಪ್ರತ್ಯೇಕ ಕೇಂದ್ರಗಳನ್ನು ಮೀಸಲಿರಿಸಲಾಗಿದೆ. ಪರಿಕ್ಷಾ ಕೇಂದ್ರಗಳಲ್ಲಿ ಆಶಾ ಕಾರ್ಯಕರ್ತರು ಮತ್ತು ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಆರೋಗ್ಯ ತಪಾಸಣೆಯನ್ನು ನಡೆಸುವಲ್ಲಿ ಸಹಕರಿಸುತಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 10 ಪರೀಕ್ಷಾ ಕೆಂದ್ರಗಳು ಇದ್ದು ಕಾರ್ಕಳ ತಾಲ್ಲೂಕಿನಲ್ಲಿ 02, ಉಡುಪಿ ತಾಲ್ಲೂಕಿನಲ್ಲಿ 05, ಮತ್ತು ಕುಂದಾಪುರ ತಾಲ್ಲೂಕಿನಲ್ಲಿ 03 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಶೀತ, ಕೆಮ್ಮು , ಜ್ವರ, ನೆಗಡಿ ಈ ಮುಂತಾದ ರೋಗ ಲಕ್ಷಣಗಳು ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ.