ಮಂಗಳೂರು, ಏ 21: ತಮಗೆ ಟಿಕೆಟ್ ಕೈತಪ್ಪಲು ಪ್ರಮುಖ ಕಾರಣ ಸಂಸದ ನಳಿನ್ಕುಮಾರ್ ಕಟೀಲು ಎಂದು ಬಿಜೆಪಿ ಮುಖಂಡ ಮಾಜಿ ಶಾಸಕ ಕೃಷ್ಣ ಪಾಲೇಮಾರ್ ಆರೋಪ ಮಾಡಿದ್ದಾರೆ.
ಬಿಜೆಪಿ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಉತ್ತರ ಕ್ಷೇತ್ರದಲ್ಲಿ ಡಾ.ಭರತ್ ಶೆಟ್ಟಿ ಅವರನ್ನು ಕಣಕ್ಕೆ ಇಳಿಸಿರುವುದರಿಂದ ಅಸಮಾಧಾನಗೊಂಡಿರುವ ಕೃಷ್ಣ ಪಾಲೇಮಾರ್ ತನಗೆ ಟಿಕೆಟ್ ಕೈ ತಪ್ಪಲು ಸಂಸದ ನಳಿನ್ಕುಮಾರ್ ಕಟೀಲು ಅವರೇ ಕಾರಣ ಎಂದು ಆರೋಪಿಸಿದ್ದಾರೆ.
ಶುಕ್ರವಾರ ಮಧ್ಯಾಹ್ನದ ತನಕವೂ ನನಗೆ ಟಿಕೆಟ್ ಸಿಗಲಿದೆ ಎಂದೇ ನಂಬಿದ್ದೆ. ಬಿಜೆಪಿ ರಾಜ್ಯಾಧ್ಯಕ್ಷರು ದೂರವಾಣಿ ಕರೆ ಮಾಡಿ ಬಿ ಫಾರ್ಮ್ ಸಿಗುವುದಾಗಿ ಹೇಳಿದ್ದರು. 23 ರಂದು ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿದ್ದೆ. ಆದರೆ ಕೊನೆಯ ಕ್ಷಣದಲ್ಲಿ ನನಗೆ ಟಿಕೆಟ್ ನಿರಾಕರಿಸಲಾಗಿದೆ. ಟಿಕೆಟ್ ಕೊಟ್ಟಿಲ್ಲ ಎಂದು ನಾನು ಪಕ್ಷದ ವಿರುದ್ಧ ಎಂದಿಗೂ ಹೋಗುವುದಿಲ್ಲ. ಪಕ್ಷದ ಋಣ ನನ್ನ ಮೇಲಿದೆ ಎಂದು ಹೇಳಿದ್ದಾರೆ.