ಮಂಗಳೂರು, ಏ 21: ವಿಧಾನಸಭೆ ಚುನಾವಣೆ ಹಿನ್ನೆಲೆ ಎಪ್ರಿಲ್ 27 ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬಂಟ್ವಾಳಕ್ಕೆ ಆಗಮಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ರಾಜ್ಯದ ಉನ್ನತ ನಾಯಕರು ಭಾಗವಹಿಸಲಿದ್ದು, ಇದು ಜಿಲ್ಲಾ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವಾಗಲಿದೆ ಎಂದು ಹೇಳಲಾಗಿದೆ. ಏ.27ರಂದು ಬಂಟ್ವಾಳಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ಇರುವ ಮೈದಾನದಲ್ಲಿ ಭಾಷಣ ಮಾಡಲಿದ್ದಾರೆ. ಬಳಿಕ ಧರ್ಮಸ್ಥಳಕ್ಕೆ ತೆರಳಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.
ಕೆಲ ದಿನಗಳ ಹಿಂದೆಯಷ್ಟೇ ರಾಹುಲ್ ಕರಾವಳಿಗೆ ಭೇಟಿ ನೀಡಿದ್ದರು. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಪರವಾಗಿ ಹಬ್ಬಿರುವ ಅಲೆಯನ್ನು ಕರಾವಳಿಯಲ್ಲೂ ವಿಸ್ತರಿಸುವ ಭರವಸೆಯನ್ನಿಟ್ಟುಕೊಂಡು, ಪಕ್ಷ ರಾಹುಲ್ ಪ್ರವಾಸವನ್ನು ಮತ್ತೊಮ್ಮೆ ಆಯೋಜಿಸುತ್ತಿದೆ.