ಉಡುಪಿ, ಎ.21: ಉಡುಪಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಶಿರೂರು ಮಠದ ಲಕ್ಷ್ಮೀವರತೀರ್ಥ ಸ್ವಾಮೀಜಿ ಅವರು ಏ. 21 ರ ಶನಿವಾರ ನಾಮಪತ್ರ ಸಲ್ಲಿಸುವ ಮೂಲಕ ಚುನಾವಣೆ ಎದುರಿಸಲು ಸಿದ್ದವಾಗಿದ್ದಾರೆ. ಅದಕ್ಕೂ ಮುಂಚೆ ಕಡಿಯಾಳಿಯ ಮಹಿಷಮರ್ದಿನಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬಳಿಕ ನೇರವಾಗಿ ಚುನಾವಣಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು, ನಾನು ಕೂಡಾ ಬಿಜೆಪಿಗನಾಗಿದ್ದು, ಪಕ್ಷ ಟಿಕೆಟ್ ನೀಡದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆ ಎದುರಿಸುತ್ತಿದ್ದೇನೆ. ಯಾವುದೇ ಕಾರಣಕ್ಕೂ ಹಿಂದಕ್ಕೆ ಸರಿಯುವ ಪ್ರಶ್ನೆಯೇ ಇಲ್ಲ ಎಂದರು . ಒಂದು ವೇಳೆ ಖುದ್ದು ಮೋದಿ ಅವರು ನಾಮಪತ್ರ ಹಿಂಪಡೆಯುವಂತೆ ವಿನಂತಿಸಿಕೊಂಡರೆ ಆಗ ಅಲೋಚಿಸಬಹುದು. ಒಂದು ವೇಳೆ ಚುನಾವಣೆಯಲ್ಲಿ ಗೆದ್ದರೆ ಮೋದಿ ಅವರನ್ನು ಬೆಂಬಲಿಸುತ್ತೇನೆ ಎಂದು ಇದೇ ವೇಳೆ ತಿಳಿಸಿದರು.