ಉಳ್ಳಾಲ, ಏ.26: ನೇತ್ರಾವತಿ ಸೇತುವೆಯ ಸಮೀಪವಿರುವ ನೇತ್ರಾವತಿ ನದಿಯಲ್ಲಿ ಮೃತದೇಹವೊಂದು ತೇಲುತ್ತಿರುವುದು ಇಂದು ಬೆಳಗ್ಗೆ ಪತ್ತೆಯಾಗಿದೆ.ಸೇತುವೆಯಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರು ಬೆಳ್ಳಂಬೆಳಗೆ ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ತೇಲುತ್ತಿರುವುದು ಮೃತದೇಹದ ಗುರುತು ಪತ್ತೆಯಾಗಿಲ್ಲ.
ಮೃತದೇಹದ ತೇಲುತ್ತಿರುವ ಬಗ್ಗೆ ವಿಷಯ ಹರಡುತ್ತಿದ್ದಂತೆ, ಕುತೂಹಲದಿಂದ ವಾಹನ ಪ್ರಯಾಣಿಕರು ಸೇತುವೆಯಲ್ಲಿ ವಾಹನಗಳನ್ನು ನಿಲ್ಲಿಸಿ ನದಿಗೆ ಇಣುಕಿ ನೋಡುತ್ತಿದ್ದಾರೆ. ಇದರಿಂದ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದ್ದು, ಸುಗಮ ಸಂಚಾರಕ್ಕಾಗಿ ಟ್ರಾಫಿಕ್ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಮೃತದೇಹ ಮೇಲೆತ್ತಲು ಕ್ರಮ ಕೈಗೊಳ್ಳುತ್ತಿದ್ದಾರೆ.