ಮಂಗಳೂರು, ಮೇ 04: ನಗರದ ಕೊಟ್ಟಾರದಲ್ಲಿ 35 ಕ್ಕೂ ಅಧಿಕ ಬಿಜೆಪಿ ಬೆಂಬಲಿಗರು ಶಾಸಕ ಜೆ ಆರ್ ಲೋಬೋ ನೇತೃತ್ವದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ಬಿ.ಜೆ.ಪಿ. ನಾಯಕರು ಹಾಗೂ ಕಾರ್ಯಕರ್ತರು ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಹಾಗೂ ಕಾಂಗ್ರೆಸ್ ಸರಕಾರದ ಜನಪರ ಯೋಜನೆಗಳನ್ನು ಮೆಚ್ಚಿ ಶಾಸಕ ಜೆ ಆರ್ ಲೋಬೋ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭ ಮಾತನಾಡಿದ ಶಾಸಕರು, ತಮ್ಮ ಸರಕಾರದ ಅಭಿವೃದ್ಧಿ ಕಾರ್ಯಗಳು ಇತರರಿಗೆ ಮಾರ್ಗದರ್ಶನವಾಗಿದೆ. ನಮ್ಮ ಪಕ್ಷದಲ್ಲಿ ಆಗಿರುವಂತಹ ಅಭಿವೃದ್ಧಿ ಕೆಲಸಗಳನ್ನು ನೋಡಿ ಬಿಜೆಪಿಯಿಂದ ನಮ್ಮ ಪಕ್ಷಕ್ಕೆ ಬೇರೆ ಪಕ್ಷಗಳ ಸದಸ್ಯರು ಸೇರ್ಪಡೆಯಾಗುತ್ತಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರು ಅವರಿಗೆ ನಮ್ಮ ಸ್ವಾಗತವಿದೆ. ಎಲ್ಲರಿಗೂ ನಮ್ಮ ಪಕ್ಷದಲ್ಲಿ ಮುಕ್ತ ಅವಕಾಶ ಇದೆ ಎಂದು ಹೇಳಿದರು.