ಬೆಂಗಳೂರು, ಮೇ 06 : ನಿರೀಕ್ಷೆಯಂತೆ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲೆಯರೇ ಮೇಲುಗೈ ಸಾಧಿಸಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ ಫಲಿತಾಂಶದಲ್ಲಿ ಶೇ.4ರಷ್ಟು ಏರಿಕೆ ಕಂಡು ಬಂದಿದೆ. ಒಟ್ಟಾರೆ ಶೇ.71.93ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ಇಬ್ಬರು ವಿದ್ಯಾರ್ಥಿಗಳು 625ಕ್ಕೆ 625 ಅಂಕ, 8 ವಿದ್ಯಾರ್ಥಿಗಳು 624 ಅಂಕ ಹಾಗೂ ಹನ್ನೆರಡು ವಿದ್ಯಾರ್ಥಿಗಳು 625ಕ್ಕೆ 623 ಅಂಕ ಪಡೆದಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಕಾರ್ಯದರ್ಶಿ ಶಾಲಿನಿ ರಜನೀಶ್ ಇಂದು ಫಲಿತಾಂಶ ಪ್ರಕಟಿಸಿದ್ದಾರೆ. 8,38,088 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ವಿದ್ಯಾರ್ಥಿನಿಯರು ಶೇ.78.01ರಷ್ಟು ಫಲಿತಾಂಶ ಪಡೆಯುವ ಮೂಲಕ ಈ ಬಾರಿಯೂ ಮೇಲುಗೈ ಸಾಧಿಸಿದ್ದಾರೆ.
ಫಲಿತಾಂಶದಲ್ಲಿ ಕೃಷ್ಣಾನಗರಿ ಉಡುಪಿ ಮೊದಲನೆ ಸ್ಥಾನದಲ್ಲಿದ್ದರೆ, ಯದಗಿರಿ ಕೊನೆಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. 43 ಶಾಲೆಗಳು ಶೂನ್ಯ ಸಂಪಾದನೆ ಮಾಡಿವೆ.