ಬೆಂಗಳೂರು, ಮೇ 07 : ಜನತಾ ಪ್ರಣಾಳಿಕೆ, ಜನರದ್ದೇ ಆಳ್ವಿಕೆ ಅನ್ನೋ ಹೆಸರಿನಲ್ಲಿ ಜೆಡಿಎಸ್ ನ ಪ್ರಣಾಳಿಕೆಯನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರಿನಲ್ಲಿ ಮೇ, ೦7 ರ ಸೋಮವಾರ ಬಿಡುಗಡೆ ಮಾಡಿದರು. ಪ್ರಣಾಳಿಕೆ ಬಿಡುಗಡೆ ಬಳಿಕ ಮಾತನಾಡಿದ ಅವರು ಜೆಡಿಎಸ್ ಪಕ್ಷವು ಚುನಾವಣೆಯಲ್ಲಿ ಗೆದ್ದ ಬಳಿಕ ಲೋಕಾಯುಕ್ತ ಸಂಸ್ಥೆಗೆ ಬಲವರ್ಧನೆ ಮಾಡಿ ಎಸಿಬಿ ನಿರ್ಮೂಲನೆ ಮಾಡುವುದಾಗಿ ಹೇಳಿದರು. ರಾಜ್ಯದ ಸರ್ವಾಂಗೀಣ ಅಭಿವೃದ್ದಿಗಾಗಿ ವಿಶೇಷ ಒತ್ತು ನೀಡಲಾಗುವುದು. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಪ್ರಣಾಳಿಕೆಗಿಂತ ಜೆಡಿಎಸ್ ಪ್ರಣಾಳಿಕೆ ಉತ್ತಮವಾಗಿದೆ ಎಂದರು.
ಇನ್ನು ಜೆಡಿಎಸ್ ಪ್ರಣಾಳಿಕೆಯಲ್ಲಿ ಈ ಕೆಳಗಿನ ಅಂಶಗಳನ್ನು ಒಳಗೊಂಡಿದೆ;
ಲೋಕಾಯುಕ್ತ ಸಂಸ್ಥೆಗಾಗಿ ಪ್ರತ್ಯೇಕ ಪೊಲೀಸ್ ವ್ಯವಸ್ಥೆ
ರೈತರ ಸಾಲ ಮನ್ನಾ
ಲೋಕಾಯುಕ್ತಕ್ಕೆ ಪ್ರತ್ಯೇಕ ಪೊಲೀಸ್ ವ್ಯವಸ್ಥೆ
ರೈತರ ಸಮಸ್ಯೆ ಆಲಿಸಲು ಪ್ರತಿ ತಿಂಗಳು ವಿಧಾನಸೌಧದಲ್ಲಿ ರೈತರ ಜೊತೆ ಸಂವಾದ
ಗ್ರಾಮೀಣ ಪ್ರದೇಶ ಯುವಕರಿಗೆ ಮಾಸಿಕ 7-8 ಸಾವಿರ ವೇತನ ನೀಡಿ ಸರ್ಕಾರಿ ಜಮೀನುಗಳಲ್ಲಿ ಅರಣ್ಯ ಬೆಳೆಸುವ ಜವಾಬ್ದಾರಿ
ಮುಂತಾದ ಅಂಶಗಳಿಗೆ ವಿಶೇಷ ಆದ್ಯತೆ ನೀಡಲಾಗಿದೆ.