ಕಾಸರಗೋಡು, ಸೆ. 15(DaijiworldNews/SM): ಜಿಲ್ಲೆಯಲ್ಲಿ ಬುಧವಾರ 119 ಮಂದಿಗೆ ಕೊರೋನಾ ಸೋಂಕು ದ್ರಢಪಟ್ಟಿದೆ. ಈ ಪೈಕಿ 113 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ.
ಐದು ಮಂದಿ ಹೊರರಾಜ್ಯ ಹಾಗೂ ಓರ್ವ ವಿದೇಶದಿಂದ ಬಂದವರಲ್ಲಿ ಸೋಂಕು ಪತ್ತೆಯಾಗಿದೆ. ಈ ನಡುವೆ ಜಿಲ್ಲೆಯಲ್ಲಿ ಬುಧವಾರದಂದು ಮತ್ತೆ 83 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 7541 ಮಂದಿಗೆ ಸೋಂಕು ದೃಢಪಟ್ಟಿದೆ. ಸದ್ಯ 1817 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 3035 ಮಂದಿ ನಿಗಾದಲ್ಲಿದ್ದಾರೆ.