ಕಾಸರಗೋಡು, ಸೆ. 17 (DaijiworldNews/SM): ಜಿಲ್ಲೆಯಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದ್ದು, ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನದಲ್ಲಿ ಮುನ್ನೂರಕ್ಕೂ ಅಧಿಕ ಸೋಂಕಿತರು ಪತ್ತೆಯಾಗಿದ್ದಾರೆ. ಗುರುವಾರ 319 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಸೋಂಕಿತರ ಪೈಕಿ 289 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ವಿದೇಶದಿಂದ ಬಂದ 20, ಹೊರರಾಜ್ಯಗಳಿಂದ ಬಂದ 9 ಮಂದಿಗೆ ಸೋಂಕು ಪತ್ತೆಯಾಗಿದೆ. ಈ ನಡುವೆ, 130 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಕಳೆದ 15 ದಿನಗಳಿಂದ 2386 ಮಂದಿಗೆ ಸೋಂಕು ತಗಲಿದೆ. 2,222 ಮಂದಿಗೆ ಸಂಪರ್ಕದಿಂದ ಸೋಂಕು ದೃಢಪಟ್ಟಿದೆ.