ಬೆಂಗಳೂರು, ಮೇ 10: ರಾಜರಾಜೇಶ್ವರಿ ನಗರದಲ್ಲಿ ಅಕ್ರಮ ವೋಟರ್ ಐಡಿಗಳ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ತಂಡದಿಂದ ಈ ದೂರು ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು , ದೂರಿನಂತೆ ಶಾಸಕ ಮುನಿರತ್ನ 14ನೇ ಆರೋಪಿಯಾಗಿದ್ದಾರೆ.
ಮಂಗಳವಾರ ಪತ್ತೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಅಕ್ರಮವಾಗಿ ಸಂಗ್ರಹಿಸಿಟ್ಟ ವೋಟರ್ ಐಡಿ ಹಾಗೂ ಅಪಾರ ಪ್ರಮಾಣದಲ್ಲಿ ನಗದು ವಶಪಡಿಸಿಕೊಂಡಿದ್ದರು.