ಬಂಟ್ವಾಳ, ಸೆ23: ರಾಜ್ಯ ಅರಣ್ಯ ಸಚಿವ ಬಿ. ರಮಾನಾಥ ರೈ ಅವರ ಸ್ವಕ್ಷೇತ್ರವಾದ ಬಂಟ್ವಾಳದ ಪುರಸಭೆ ಭ್ರಷ್ಟಾಚಾರದಲ್ಲಿ ರಾಜ್ಯದ ನಂ.1 ಪುರಸಭೆ ಎನ್ನುವ ಕುಖ್ಯಾತಿ ಪಡೆದಿರುವುದು ವಿಪರ್ಯಾಸ ಎಂದು ಪುರಸಭಾ ವಿಪಕ್ಷ ಸದಸ್ಯ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವದಾಸ ಶೆಟ್ಟಿ ಅವರು ಆರೋಪಿಸಿದ್ದಾರೆ.
ಬಿ.ಸಿ.ರೋಡಿನ ರಂಗೋಲಿ ಹೊಟೇಲ್ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಟ್ವಾಳ ಪುರಸಭೆಯಲ್ಲಿ ಕಸ ಸಂಗ್ರಹ, ತ್ಯಾಜ್ಯ ನಿರ್ವಹಣೆ ಮತ್ತಿತರ ವಿಚಾರದಲ್ಲಿ ಭ್ರಷ್ಟಾಚಾರ ಮಾಡಲಾಗಿದ್ದು, ಇದನ್ನು ಉನ್ನತ ಮಟ್ಟದಲ್ಲಿ ತನಿಖೆ ನಡೆಸಬೇಕು ಎಂದವರು ಒತ್ತಾಯಿಸಿರು.
ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಮಾಲಕತ್ವದ ವಾಣಿಜ್ಯ ಸಂಕೀರ್ಣದಲ್ಲಿ ಅಕ್ರಮ ನಡೆದ ಬಗ್ಗೆ ದಾಖಲೆ ಸ್ಪಷ್ಟವಾಗಿದ್ದರೂ, ಸಚಿವರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ. 5 ಸೆಂಟ್ಸ್ ನಿವೇಶನದಲ್ಲಿ ಅನಧಿಕೃತವಾಗಿ ವಾಣಿಜ್ಯ ಕಟ್ಟಡವನ್ನು ನಿರ್ಮಿಸಲಾದ ಪ್ರಕರಣ ರಾಜ್ಯದ ಹಿರಿಯ ಸಚಿವರೊಬ್ಬರ ಘನತೆಗೆ ಶೋಭೆಯಲ್ಲ. ಈ ಬಗ್ಗೆ ಸರಕಾರವೇ ತನ್ನ ಅಭಿಪ್ರಾಯ ವ್ಯಕ್ತಪಡಿಸಲು ಸಾರ್ವಜನಿಕ ಹಿತಾಸಕ್ತಿ ಯಂತೆ ಒತ್ತಾಯಿಸಲಾಗುವು ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ರಾಜೇಶ್ ನಾಯ್ಕ, ರುಕ್ಮಯ ಪೂಜಾರಿ, ಜಿ.ಆನಂದ, ದಿನೇಶ್ ಭಂಡಾರಿ,ಸುಲೋಚನ ಭಟ್ ಜಿ.ಕೆ.ರಾಮದಾಸ ಬಂಟ್ವಾಳ, ಮೋನಪ್ಪ ದೇವಸ್ಯ ಮೊದಲಾದವರು ಉಪಸ್ಥಿತರಿದ್ದರು.