ಮಂಗಳೂರು, ಮೇ 15: ಕುತೂಹಲ ಕೆರಳಿಸಿದ್ದ ವಿಧಾನ ಸಭಾ ಕ್ಷೇತ್ರಗಳಲ್ಲಿ ಒಂದಾದ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದಲ್ಲಿ ಡಾ. ಭರತ್ ಶೆಟ್ಟಿ ಅಮೋಘ ಗೆಲುವು ಸಾಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ ಅತ್ಯಂತ ಕುತೂಹಲ ಕೆರಳಿಸಿರುವ ಕ್ಷೇತ್ರಗಳಲ್ಲಿ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ಅಥವಾ ಸುರತ್ಕಲ್ ಕೂಡಾ ಒಂದು. ಕೋಮು ಸೂಕ್ಷ್ಮ ಪ್ರದೇಶ ಎಂದೇ ಗುರುತಿಸಲಾಗುವ ಈ ಕ್ಷೇತ್ರ ಹಿಂದೆ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿತ್ತು. ಆದರೆ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಯನ್ನು ಛಿದ್ರಗೊಳಿಸಿ ಬಿಜೆಪಿ ಇಲ್ಲಿ ವಿಜಯದ ನಗೆ ಬೀರಿದೆ.
ಶಾಸಕ ಮೊಯ್ದೀನ್ ಬಾವಾ ವಿರುದ್ಧ ಡಾ. ಭರತ್ ಶೆಟ್ಟಿ ಈ ಬಾರಿ ಸ್ಪರ್ಧಿಸಿದ್ದು 18,535 ಮತಗಳ ಅಂತರದಿಂದ ಗೆದ್ದು ವಿಜಯದ ನಗೆ ಬೀರಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಡಾ. ಭರತ್ ಶೆಟ್ಟಿ ಅವರಿಗೆ ಒಟ್ಟು 98648 ಮತಗಳು ಬಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಮೊಯ್ದೀನ್ ಬಾವಾ 72,000 ಮತಗಳನ್ನಷ್ಟೇ ಪಡೆಯಲು ಶಕ್ತರಾಗಿದ್ದಾರೆ.
ಶಾಸಕ ಮೊಯ್ದೀನ್ ಬಾವಾ ವಿರುದ್ಧ ಡಾ. ಭರತ್ ಶೆಟ್ಟಿ ಈ ಬಾರಿ ಸ್ಪರ್ಧಿಸಿದ್ದು 18,535 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಳೆದ ಬಾರಿ ಕಾಂಗ್ರೆಸ್ ಪಕ್ಷದ ಮೊಯ್ದೀನ್ ಬಾವಾ ಅವರ ಎದುರು 5373 ಮತಗಳ ಅಂತರದಿಂದ ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್ ಪರಾಭವಗೊಂಡಿದ್ದರು. ಆದರೆ ಈ ಬಾರಿ ಬಿಜೆಪಿ ಪಕ್ಷದ ಅಭ್ಯರ್ಥಿ ಡಾ.ಭರತ್ ಶೆಟ್ಟಿ ಗೆಲುವು ಸಾಧಿಸಿದ್ದಾರೆ.