ಮಂಗಳೂರು, ಸೆ23: ನಿಯಮಗಳನ್ನು ಉಲ್ಲಂಘಿಸಿ ವಾಹನ ಚಲಾಯಿಸುವವರ ಮತ್ತು ವಾಹನಗಳನ್ನು ಬೇಕಾಬಿಟ್ಟಿ ನಿಲುಗಡೆ ಮಾಡುವವರ ವಿರುದ್ಧ ಕಾರ್ಯಾಚರಣೆ ನಡೆಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಟ್ರಾಫಿಕ್ ವಿಭಾಗದ ಎಸಿಪಿ ತಿಲಕ್ ಚಂದ್ರ ತಿಳಿಸಿದ್ದಾರೆ.
ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ನಿಲುಗಡೆ ಮಾಡುವುದರಿಂದ ಬೇರೆ ವಾಹನಗಳಿಗೆ ತೊಂದರೆ ಉಂಟಾಗುತ್ತದೆ ಎನ್ನುವ ದೂರುಗಳು ಕೇಳಿ ಬಂದಿದೆ. ಪೊಲೀಸ್ ಫೋನ್ ಇನ್ ಕಾರ್ಯಕ್ರಮದಲ್ಲಿ ದೂರುಗಳು ಕೇಳಿ ಬಂದಿದ್ದು, ಸಂಚಾರ ನಿಯಮವನ್ನು ಉಲ್ಲಂಘಿಸಿ ರಸ್ತೆಯ ಬದಿಯಲ್ಲಿ ಪಾರ್ಕ್ ಮಾಡುವ ವಾಹನಗಳಿಗೆ ಇದೀಗ ಪೊಲೀಸರು ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಗುರುವಾರದಿಂದಲೇ ಕಾರ್ಯಾಚರಣೆ ಆರಂಭಿಸಿರುವ ಪೊಲೀಸರು ದ್ವಿಚಕ್ರ ಮತ್ತು ಚತುಶ್ಚಕ್ರ ವಾಹನಗಳಿಗೆ ಲಾಕ್ ಮಾಡುತ್ತಿದ್ದಾರೆ. ಹೀಗಾಗಿ ವಾಹನ ಚಾಲಕರು ಎಚ್ಚರಿಕೆಯಿಂದ ಇರುವುದು ಒಳಿತು.