ಪುತ್ತೂರು, ಮೇ 17: ನಾನು ಇನ್ನು ಮುಂದೆ ನಡೆಯುವ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಪುತ್ತೂರಿನ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ತಿಳಿಸಿದ್ದಾರೆ.
ಪುತ್ತೂರಿನಲ್ಲಿ ನಡೆದ ಕಾಂಗ್ರೇಸ್ ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿಯ ಸೋಲಿನಿಂದ ನಾನು ಕಂಗೆಟ್ಟಿಲ್ಲ. ಯಾಕಂದರೆ. ನಾನು ಇದುವರೆಗೆ ನಾಲ್ಕು ಬಾರಿ ಸೋತಿದ್ದೇನೆ. ಈ ಸೋಲಿನ ಬಗ್ಗೆ ನನಗೆ ಚಿಂತೆ ಇಲ್ಲ. ಬದಲಾಗಿ ನಾನು ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ. ಮುಂದೆ ಯಾವ ಚುನಾವಣೆಯಲ್ಲೂ ಸ್ಪರ್ಧಿಸಲ್ಲ ಎಂದು ಹೇಳಿದ್ದಾರೆ.
ಮುಂಬರುವ ದಿನಗಳಲ್ಲಿ ಕಾಂಗ್ರೇಸ್ ಕಾರ್ಯಕರ್ತರ ಸಮಾವೇಶ ಮಾಡಲಾಗುವುದು. ಮುಂದಿನ ಬಾರಿ ನಡೆಯುವ ವಿಧಾನಸಭೆ ಚುನವಾಣೆಗೆ ಸಮರ್ಥ ಅಭ್ಯರ್ಥಿಯನ್ನು ನಿಲ್ಲಿಸಿ ಒಗ್ಗಟ್ಟಿನಿಂದ ಗೆಲ್ಲಿಸುತ್ತೇವೆ.ಈ ಸೋಲಿನಿಂದ ನಾವು ಕಂಗೆಟ್ಟಿಲ್ಲ ಎಂದು ತಿಳಿಸಿದ್ದಾರೆ.
ನಾನು ಪುತ್ತೂರು ಕ್ಷೇತ್ರದ ಪ್ರತಿ ಮನೆ ಮನೆಗೆ ಭೇಟಿ ನೀಡುತ್ತೇನೆ. ಜನತೆಯನ್ನು ವಿಚಾರಿಸುತ್ಥೆನೆ. ಗೆಲುವಿನ ಉತ್ಸಾಹದಲ್ಲಿ ಬಿಜೆಪಿ ಕಾರ್ಯಕರ್ತರು ಪಾಪದವರ ಮನೆ ಮುಂದೆ ಪಟಾಕಿ ಸಿಡಿಸುವುದು, ಬಾಟಲಿ ಎಸೆಯುವುದು ಮಾಡುತ್ತಿದ್ದಾರೆ. ಇದರ ವಿರುದ್ದ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಿದ್ದೇನೆ. ಇಂತಹ ವರ್ತನೆ ಸರಿಯಲ್ಲ ಎಂದು ಆರೋಪಿಸಿದರು.