ಮಂಗಳೂರು, ಸೆ23: ನಗರದ ಹೊರವವಲಯದ ಅಸೈಗೋಳಿ ಎಂಬಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ಧೇಶಿಸಿ ಮಾತನಾಡುವ ವೇಳೆ ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ ಸಚಿವ ಮತ್ತೊಂದು ವಿವಾದ ಸೃಷ್ಟಿ ಮಾಡಿದ್ದಾರೆ.
ಈಗಾಗಲೇ ಅನೇಕ ಅವಹೇಳನಕಾರಿ ವಿಷಯಗಳಲ್ಲಿ ಮೂಗು ತೂರಿಸಿರುವ ಸಚಿವ ರಮಾನಾಥ ರೈ, ಚಕ್ರವರ್ತಿ ಸೂಲಿಬೆಲೆ ಅವರನ್ನು ಸೂಲೆಮಗ ಎಂದು ಕರೆದು ಅವಮಾನ ಮಾಡಿದ್ದಾರೆ. ಈಗಾಗಲೇ ವಾಟ್ಸ್ ಆಪ್ ಹಾಗೂ ಫೇಸ್ಬುಕ್ ನಲ್ಲಿ ವಿಡಿಯೋ ಹರಿದಾಡುತ್ತಿದ್ದು ಸಚಿವ ರಮಾನಾಥ ರೈ ಅವರಿಗೆ ಭಾರೀ ಮುಖಭಂಗವಾಗಿದೆ.