ವಿಟ್ಲ, ಮೇ 21 : ಮೇ 19 ರ ಶನಿವಾರ ರಾತ್ರಿ ವಿಟ್ಲದಲ್ಲಿ ಕಾಂಗ್ರೆಸ್ ಜೆಡಿಎಸ್ ಸರ್ಕಾರ ರಚಿಸುವ ಬಗ್ಗೆ ವಿಜಯೋತ್ಸವ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂದಪಟ್ಟಂತೆ ವಿಟ್ಲ ಪೊಲೀಸರು ನಾಲ್ಕು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಮೊಹಮ್ಮದ್ ತಮಿನ್, ಅಬ್ದುಲ್ ರಹಿಮಾನ್, ಮೊಹಮ್ಮದ್ ಝಕಾರಿಯಾ, ಸುಲೈಮಾನ್ ಎಂದು ಗುರುತಿಸಲಾಗಿದೆ.
ಇನ್ನು ವಿಟ್ಲದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಹಿನ್ನಲೆಯಲ್ಲಿ ನಿತಿನ್ ಮತ್ತು ದಿನೇಶ್ ಎನ್ನುವವರನ್ನು ಕೂಡಾ ಬಂಧಿಸಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರ ರಚನೆಗೆ ಸಿದ್ದತೆ ನಡೆಸುತ್ತಿರುವಂತೆಯೇ ಇತ್ತ ವಿಟ್ಲ ಪರಿಸರದಲ್ಲಿ ಇತ್ತಂಡಗಳ ನಡುವೆ ಘರ್ಷಣೆ ನಡೆದಿತ್ತು. ಕಾಂಗ್ರೆಸ್ ಕಾರ್ಯಕರ್ತರು ಬೈಕಿನಲ್ಲಿ ವಿಜಯೋತ್ಸವ ಆಚರಿಸುತ್ತಾ ಅಲ್ಲಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸುಸುವ ವೇಳೆ ಬಿಜೆಪಿಗೆ ದಿಕ್ಕಾರ ಎಂದು ಘೋಷಂಣೆ ಕೂಗಿದ್ದು ಈ ವೇಳೆ ಇತ್ತಂಡಗಳ ನಡುವೆ ಮಾತಿನ ಚಕಮಕಿ ನಡೆದಿತ್ತು. ಘಟನೆಯಲ್ಲಿ ಶರತ್ ಹಾಗೂ ಧನರಾಜ್ ಸೇರಿ ನಾಲ್ವರು ಗಾಯಗೊಂಡಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇನ್ನು ಘಟನೆಯನ್ನು ಖಂಡಿಸಿ ನಿನ್ನೆ ವಿಟ್ಲ ಠಾಣೆಯ ಮುಂಭಾಗ ಸಂಸದ ನಳಿನ್ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆಯನ್ನು ನಡೆಸಲು ಬಿಜೆಪಿ ಕಾರ್ಯಕರ್ತರು ಸಿದ್ದತೆ ನಡೆಸಿದ್ರು. ಈ ಸಂದರ್ಭ 48 ಗಂಟೆಯ ಒಳಗಾಗಿ ಆರೋಪಿಗಳನ್ನು ಬಂಧಿಸುವ ಭರವಸೆಯನ್ನು ಪೊಲೀಸರು ನೀಡಿದ್ರು.