ಪುತ್ತೂರು, ಮೇ 21 : ಇಲ್ಲಿನ ವಿಟ್ಲದಲ್ಲಿ ಎರಡು ಕೋಮಿನ ನಡುವೆ ನಡೆದ ಸಂಘರ್ಷಕ್ಕೆ ಸಂಬಂಧಿಸಿ ಕೋಮು ಭಾವನೆ ಕೆರಳಿಸುವ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಪಾರ್ವರ್ಡ್ ಮಾಡಿದ್ದಾರೆ ಎಂಬ ಅಪಾದನೆ ಮೇರೆಗೆ ಓರ್ವನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪಂಜ ಸಮೀಪದ ಪಂಬೆತ್ತಾಡಿ ನಿವಾಸಿ 30 ರ ಹರೆಯದ ದಯಾನಂದ ಎಂಬವರನ್ನು ಸುಬ್ರಹ್ಮಣ್ಯದಲ್ಲಿ ವಶಕ್ಕೆ ಪಡೆಯಲಾಗಿದೆ. ಸುಬ್ರಹ್ಮಣ್ಯದಲ್ಲಿ ಅಂಗಡಿಯೊಂದರಲ್ಲಿ ಮಾರಾಟ ವಿಭಾಗದಲ್ಲಿ ಈತ ಕೆಲಸ ನಿರ್ವಹಿಸುತ್ತಿದ್ದ. ಈತನ ಮೇಲೆ ಕೋಮು ಭಾವನೆ ಕೆರಳಿಸುವ ಸಂದೇಶ ರವಾನಿಸಿದ ಆಪಾದನೆ ಇದ್ದು, ಈ ಹಿನ್ನೆಲೆ ಪೊಲೀಸರು ದಯಾನಂದ್ ನನ್ನು ವಶಕ್ಕೆ ಪಡೆದುಕೊಂಡಿದ್ದು ವಿಚಾರಣೆ ಮುಂದುವರೆಸಿದ್ದಾರೆ.