ಮಂಗಳೂರು ಸೆ 24 : ಮುಂದಿನ ವರ್ಷದಿಂದ ಏಕರೂಪದ ರಜೆ ನಿಗದಿಪಡಿಸುವ ನಿಟ್ಟಿನಲ್ಲಿ ಶೈಕ್ಷಣಿಕ ವರ್ಷದ ಆರಂಭದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಮತ್ತು ವಕ್ಫ್ ಖಾತೆ ಸಚಿವ ತನ್ವಿರ್ ಸೇಠ್ ಹೇಳಿದ್ದಾರೆ.ಶಾಲೆಗಳಿಗೆ ವಿವಿಧ ರಜೆ ಘೋಷಣೆ ಕುರಿತಂತೆ ಗೊಂದಲ ನಿವಾರಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ವರ್ಷ ದಸರಾ ರಜೆಯಲ್ಲಿ ವ್ಯತ್ಯಾಸಗಳಾಗಿವೆ. ಮೈಸೂರು, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರಜೆಯಲ್ಲಿ ಮಾರ್ಪಾಟು ಮಾಡಲಾಗಿದೆ. ಆದರೆ ಮುಂದಿನ ಶೈಕ್ಷಣಿಕ ವರ್ಷದಿಂದ ಹಬ್ಬಗಳಿಗೆ ಹೊಂದಿಕೆಯಾಗುವಂತೆ ರಜೆಗಳನ್ನು ಶೈಕ್ಷಣಿಕ ವರ್ಷದ ಆರಂಭದಲ್ಲೇ ಪ್ರಕಟಿಸಲಾಗುವುದು ಎಂದರು.