ಬೆಂಗಳೂರು, ಮೇ 24 : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ಮುಂದುವರಿಸಿರುವ ಪೊಲೀಸರು ಮಹಾರಾಷ್ಟ್ರ ಮೂಲದ ಮೂವರು ಆರೋಪಿಗಳನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತರನ್ನು ಅಮೋಲ್ ಕಾಳೆ, ಅಮಿತ್ ದೇಗ್ವೇಕರ್ ಮತ್ತು ಮನೋಹರ್ ಎಡವೆ ಎಂದು ಗುರುತಿಸಲಾಗಿದೆ.
ಶಸ್ತ್ರಾಸ್ತ್ರ ಕಾಯ್ದೆಯಡಿ ಅಡಿ ಅರೋಪಿಗಳನ್ನು ಮೇ 21 ರಂದು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದರು. ಬಳಿಕ ಆರೋಪಿಗಳನ್ನು 5ನೇ ಎಸಿಎಂಎಂ ಕೋರ್ಟ್ಗೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಮತ್ತೆ ವಶಕ್ಕೆ ಪಡೆದುಕೊಂಡರು. ವಿಚಾರಣೆ ಸಂದರ್ಭ ಗೌರಿ ಹತ್ಯೆ ಪ್ರಕರಣದ ಕುರಿತು ಸಂಶಯ ಮೂಡಿದ್ದರಿಂದ ಉಪ್ಪಾರಪೇಟೆ ಪೊಲೀಸರ ಜೊತೆಗೆ ಎಸ್ಐಟಿ ಅಧಿಕಾರಿಗಳಿಂದಲೂ ತೀವ್ರ ವಿಚಾರಣೆ ನಡೆಸಿದ್ದಾರೆ. ಅವರು ನೀಡಿದ ಮಾಹಿತಿಗಳಂತೆ ಎಸ್ಐಟಿ 7 ತಂಡಗಳ ಮೂಲಕ ಅಂತರಾಜ್ಯಗಳಲ್ಲೂ ಪರಿಶೀಲನೆ ನಡೆಸಿದೆ.
ಹೀಗಾಗಿ ಬಂಧಿತ ಆರೋಪಿಗಳು ಗೌರಿ ಹತ್ಯೆ ಪ್ರಕರಣ ಸಂಬಂಧ ಮಹತ್ವದ ಸುಳಿವು ನೀಡಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.