ಮೇ, 29: ರೈತರ ರಾಷ್ಟ್ರೀಕೃತ ಹಾಗೂ ಖಾಸಗಿ ಸಾಲ ಮನ್ನಾಗೆ ಆಗ್ರಹಿಸಿ ಬಿಜೆಪಿ ಕರೆ ನೀಡಿದ್ದ ಬಂದ್ ವೇಳೆ ಪೊಲೀಸರಿಗೆ ಆವಾಜ್ ಹಾಕಿದ ಆರೋಪ ಮಾಜಿ ಸಚಿವ ರೇಣುಕಾಚಾರ್ಯ ಮೇಲೆ ವ್ಯಕ್ತವಾಗಿದೆ. ದಾವಣಗೆರೆಯ ಹೊನ್ನಾಳಿ ಪಟ್ಟಣದಲ್ಲಿ, ಒತ್ತಾಯವಾಗಿ ಬಂದ್ ಮಾಡಬೇಡಿ ಎಂದು ಹೊನ್ನಾಳಿ ಸರ್ಕಲ್ ಇನ್ಸ್ಪೆಕ್ಟರ್ ರಮೇಶ್ ಹೇಳಿದಾಗ ರೇಣುಕಾಚಾರ್ಯ ಎಸ್ ಐ ಅವರಿಗೆ ಅವಾಜ್ ಹಾಕಿದ್ದಾರೆ. ಇದೀಗ ಈ ಬೆದರಿಕೆ ವಿಡೀಯೋ ವೈರಲ್ ಆಗಿದೆ.
ಇದಲ್ಲದೆ ಪೊಲೀಸರೊಂದಿಗೆ ಗಲಾಟೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಸಂಸದ ಸಂಗಣ್ಣ ಕರಡಿ, ಪುತ್ರ ಅಮರೇಶ್ ಕರಡಿ ಸೇರಿದಂತೆ ಸುಮಾರು 38 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬಿಜೆಪಿ ಪ್ರತಿಭಟನೆಯ ವೇಳೆ ಕೊಪ್ಪಳದಲ್ಲಿ ಒತ್ತಾಯಪೂರ್ವಕವಾಗಿ ಅಂಗಡಿಗಳನ್ನು ಬಂದ್ ಮಾಡಿಸಲಾಗಿತ್ತು. ಈ ವೇಳೆ ಮೈಕ್ ಅಳವಡಿಸಿದ್ದ ಆಟೋವನ್ನು ವಶಕ್ಕೆ ಪಡೆದಿದ್ದರು. ಇನ್ನು ಒತ್ತಾಯ ಪೂರ್ವಕ ಬಂದ್ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಸಂಗಣ್ಣ ಕರಡಿ ಹಾಗೂ ಡಿವೈಎಸ್ಪಿ ಎಸ್.ಎಂ.ಸಂದಿಗವಾಡ ಅವರು ನಡುವೆ ತೀವ್ರ ವಾಗ್ವಾದ ನಡೆದಿತ್ತು. ಪೊಲೀಸ್ ಅಧಿಕಾರಿಯನ್ನು ಎಳೆದಾಡಿದ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿತ್ತು.