ಮಂಗಳೂರು, ಜೂ 01: ದನ ಕಳ್ಳತನ ಹಾಗೂ ದರೋಡೆಯಲ್ಲಿ ಮುಂಚೂಣಿಯಲ್ಲಿದ್ದ ದುಷ್ಕರ್ಮಿಗಳ ಮೇಲೆ ಪೊಲೀಸರು ಗುಂಡು ಹಾರಿಸಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಬಂಧಿತರನ್ನು ಸದ್ದಾಂ ಮಾರಿಪಳ್ಳ, ಮೌಸೀನ್ ಸುರತ್ಕಲ್, ಮಹಮ್ಮದ್ ಇರ್ಶಾದ್ ಬೊಳ್ಳಾಯಿ ಎಂದು ಗುರುತಿಸಲಾಗಿದೆ.
ತಡರಾತ್ರಿ ಬಂಟ್ವಾಳ ತಾಲೂಕಿನ ಮಣಿಹಳ್ಳದಲ್ಲಿ ಈ ದುಷ್ಕರ್ಮಿಗಳು ದರೋಡೆಗೆ ಸಂಚು ರೂಪಿಸಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಬೆಳ್ತಂಗಡಿ ಮತ್ತು ಬಂಟ್ವಾಳ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಕೆಂಪು ಕಲರ್ ಮಾರುತಿ ಸ್ವಿಪ್ಟ್ ಕಾರಿನಲ್ಲಿ ಬಂದಿದ್ದ ದರೋಡೆಕೋರರನ್ನು ಪೊಲೀಸರು ಬೆನ್ನಟ್ಟಿ ಬಂಧಿಸಲು ಯತ್ನಿಸಿದ್ದಾರೆ. ಆದರೆ, ಬಂಟ್ವಾಳದ ಮಣಿಹಳ್ಳ ಜಂಕ್ಷನ್ನಲ್ಲಿ ಕಾರು ನಿಲ್ಲಿಸಲು ಪೊಲೀಸರು ಸೂಚನೆ ನೀಡಿದಾಗ ಪೊಲೀಸರ ಮೇಲೆಯೇ ಕಾರು ಹರಿಸಲು ದರೋಡೆಕೋರು ಪ್ರಯತ್ನಿಸಿದ್ದಾರೆ.
ಈ ವೇಳೆ ಪೊಲೀಸರು ದರೋಡೆಕೋರರ ಮೇಲೆ ಪೈರಿಂಗ್ ಮಾಡಿದ್ದು, ಕಾರು ನಿಲ್ಲಿಸಿ ಆರೋಪಿಗಳು ಪರಾರಿಯಾಗಲು ಪ್ರಯತ್ನಿಸಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಿದ್ದು, ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಆರೋಪಿ ಸದ್ದಾಂ ಕೊಲೆ ಮತ್ತು ಕೊಲೆಯತ್ನ ಆರೋಪಿಯಾಗಿದ್ದಾನೆ. ಮೌಸೀನ್ ಮೇಲೆ ಬೇರೆ ಬೇರೆ ಠಾಣೆಗಳಲ್ಲಿ ಸುಮಾರು 14 ಪ್ರಕರಣಗಳಿದೆ ಎಂದು ತಿಳಿದುಬಂದಿದೆ.