ಮಂಗಳೂರು, ನ. 11 (DaijiworldNews/SM): ದ.ಕ. ಜಿಲ್ಲಾ ಆರೋಗ್ಯ ಇಲಾಖೆ ಇಂದಿನ ಕೊರೋನಾ ವರದಿ ಬಿಡುಗಡೆ ಮಾಡಿದ್ದು, ಅದರನ್ವಯ ಜಿಲ್ಲೆಯಲ್ಲಿ ಬುಧವಾರದಂದು 63 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರಿಂದಾಗಿ ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಸೋಂಕಿತರ ಸಂಖ್ಯೆ 31,065ಕ್ಕೆ ಏರಿಕೆಯಾಗಿದೆ. ಈ ಪೈಕಿ ಪ್ರಸ್ತುತ 825 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 2,84,834 ಮಂದಿ ಪರೀಕ್ಷೆಗೊಳಪಟ್ಟಿದ್ದಾರೆ. ಈ ಪೈಕಿ 2,53,769 ಮಂದಿಯ ವರದಿ ನೆಗೆಟಿವ್ ಆಗಿದೆ. ಈ ನಡುವೆ ಬುಧವಾರದಂದು 125 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದರಿಂದಾಗಿ ಒಟ್ಟು ಗುಣಮುಖರಾದವರ ಸಂಖ್ಯೆ 29,550ಕ್ಕೆ ತಲುಪಿದೆ. ಇನ್ನು ಬುಧವಾರದಂದು ಒಬ್ಬರು ಸೋಂಕಿಗೆ ಬಲಿಯಾಗಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಒಟ್ಟು 690 ಮಂದಿ ಸೋಂಕಿಗೆ ಬಲಿಯಾದಂತಾಗಿದೆ.
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿ ಜಿಲ್ಲೆಯಲ್ಲಿ ಬುಧವಾರದಂದು ಹದಿನೇಳು ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 22,278ಕ್ಕೆ ಏರಿಕೆಯಾಗಿದೆ. ಈ ಪೈಕಿ ಪ್ರಸ್ತುತ 321 ಮಂದಿ ಮಾತ್ರವೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬುಧವಾರದಂದು 31 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಇದರಿಂದಾಗಿ ಒಟ್ಟು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ 21,771ಕ್ಕೆ ತಲುಪಿದೆ. ಇನ್ನು ಜಿಲ್ಲೆಯಲ್ಲಿ ಇಲ್ಲಿಯ ತನಕ 2,02,853 ಮಂದಿ ಪರೀಕ್ಷೆಗೊಳಪಟ್ಟಿದ್ದಾರೆ. ಈ ಪೈಕಿ 1,80,575 ಮಂದಿಯ ವರದಿ ನೆಗೆಟಿವ್ ಆಗಿದೆ.