ಬೆಂಗಳೂರು, ಜೂ03: ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳನ್ನು ವಿತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದ್ದಾರೆ.
ಕೃಷಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಿತ್ತನೆ ಬೀಜ ಹಾಗೂ ಗೊಬ್ಬರ ಕುರಿತು ರೈತರು ಸಮಸ್ಯೆಗಳನ್ನು ಎದುರಿಸುವುದಿಲ್ಲ. ಪ್ರಸಕ್ತ ವರ್ಷ ರಾಜ್ಯದಲ್ಲಿ ಶೇ.51 ರಷ್ಟು ಹೆಚ್ಚು ಮಳೆಯಾಗಿದೆ. ಮೂರು ದಿನಕ್ಕೂ ಮೊದಲೇ ಮಾನ್ಸೂನ್ ಆಗಮಿಸಿದೆ. ರೈತರು ತಮ್ಮ ಕಾರ್ಯಗಳಲ್ಲಿ ಯಾವುದೇ ಸಮಸ್ಯೆಗಳನ್ನು ಎದುರಿಸುವುದಿಲ್ಲ ಎಂದು ಹೇಳಿದ್ದಾರೆ.
ರೈತರ ನಿರೀಕ್ಷೆಗಳಿಗೆ ಅನುಸಾರವಾಗಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಾರೆ. ಉನ್ನತಮಟ್ಟದ ತಂತ್ರಜ್ಞಾನ ಮತ್ತು ಇಸ್ರೇಲ್ ನ ರೈತರು ಅನುಸರಿಸುತ್ತಿರುವ ಕೃಷಿ ಪದ್ಧತಿಗಳನ್ನು ಕರ್ನಾಟಕದಲ್ಲಿಯೂ ಅಳವಡಿಸಿಕೊಳ್ಳಬಹುದಾಗಿದೆ. ರೈತರಿಗೆ ಇದರಿಂದ ಅಪಾರ ಪ್ರಮಾಣದ ಲಾಭಗಳು ಸಿಗಲಿದೆ. ಕಳಪೆ ಗುಣಮಟ್ಟದ ಬಿತ್ತನೆ ಬೀಜಗಳನ್ನು ವಿತರಿಸುತ್ತಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸೂಚಿಸಿದ್ದಾರೆ.
ನಮ್ಮ ರಾಜ್ಯದಲ್ಲಿಯೂ ಇಸ್ರೇಲ್ ಮಾದರಿ ಕೃಷಿಯನ್ನು ತರಬೇಕಂದು ಉದ್ದೇಶಿಸಿದ್ದೇನೆ. ಇದಕ್ಕಾಗಿ ಮಂಡ್ಯದಲ್ಲಿ ಸುಮಾರು 900 ಎಕರೆ ಭೂಮಿಯನ್ನು ಇಸ್ರೇಲ್ ಮಾದರಿ ಕೃಷಿ ಮಾಡಲು ಪ್ರಾಯೋಗಿಕ ಯೋಜನೆಯನ್ನು ಹಮ್ಮಿಕೊಳ್ಳಲಾಗುವುದು. ನಮ್ಮ ರೈತರಿಗೆ ನೆರವು ನೀಡಲು ಇಸ್ರೇಲ್ ಪರಿಣಿತರನ್ನು ಕರೆತರಲಾಗುವುದು ಎಂದು ತಿಳಿಸಿದ್ದಾರೆ.