ಕೋಲ್ಕತ್ತಾ, ಜೂ 04 : ಕೇಂದ್ರ ಸರ್ಕಾರ ಒಂದನೇ ಮತ್ತು ಎರಡನೇ ತರಗತಿ ಮಕ್ಕಳಿಗೆ ಹೋಮ್ವರ್ಕ್ ನೀಡದೆ ಇರುವಂತಹ ನಿಯಮವನ್ನು ಸದ್ಯದಲ್ಲೇ ಜಾರಿಗೆ ತರಲು ಮುಂದಾಗಿದೆ. ಇದಕ್ಕಾಗಿ ಹೊಸ ವಿಧೇಯಕ ರೆಡಿ ಮಾಡಿ ಮುಂದಿನ ಸಂಸತ್ ಅಧಿವೇಶನದಲ್ಲಿ ಮಂಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯ ಮಾದರಿಯಲ್ಲೇ ’ನೋ ಹೋಂವರ್ಕ್ ವಿಧೇಯಕ’ವನ್ನು ಮುಂಗಾರು ಅಧಿವೇಶನದಲ್ಲಿ ಮಂಡಿಸಲಾಗುತ್ತದೆ. ಅದು ಅಂಗೀಕಾರವಾಗುತ್ತದೆ ಎಂಬ ವಿಶ್ವಾಸವಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ. ಕಳೆದ ತಿಂಗಳು ಮದ್ರಾಸ್ ಹೈಕೋರ್ಟ್ ನೀಡಿದ್ದ ತೀರ್ಪಿನ ಅನ್ವಯ ಮಕ್ಕಳ ಮೇಲಿನ ಒತ್ತಡ ನಿವಾರಿಸಲು ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಮುಂದಾಗುತ್ತದೆ ಎಂದಿದ್ದಾರೆ.