ಉಡುಪಿ, ಜೂ 05: ದನದ ವ್ಯಾಪಾರಿ ಹುಸೇನಬ್ಬ ಅವರ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಮರಣೋತ್ತರ ಪರೀಕ್ಷೆ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯ ನಿರೀಕ್ಷೆಯಲ್ಲಿದ್ದೇವೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 10 ಮಂದಿಯನ್ನು ಬಂಧಿಸಲಾಗಿದ್ದು, ಉಳಿದವರನ್ನು ಶೀಘ್ರವೇ ಬಂಧಿಸಲಾಗುವುದು . ಪ್ರಕರಣದ ಪ್ರಮುಖ ಆರೋಪಿ ಸುರೇಶ್ ಮೆಂಡನ್ ಯಾನೆ ಸೂರಿ ವಿರುದ್ದ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಎಂದು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ಘಟನೆಗೆ ಸಂಬಂಧಿಸಿ ಹುಸೇನಬ್ಬ ಅಸಹಜ ಸಾವು ಅಕ್ರಮ ಜಾನುವಾರು ಸಾಗಾಟ ಹಾಗೂ ಹುಸೇನಬ್ಬರನ್ನು ಹೊಡೆದು ಕೊಲೆ ಮಾಡಿರುವ ಬಗ್ಗೆ ಮೂರು ಪ್ರಕರಣ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಈ ಪ್ರಕರಣದ ಆರೋಪಿಗಳು ಶೀಘ್ರ ಬಂಧಿಸಲಾಗುವುದು ಎಂದು ಮಾಹಿತಿ ನೀಡಿದರು.
ಬಂಧನ ವಿರೋಧಿಸಿ ಪ್ರತಿಭಟನೆ
ಇನ್ನೊಂದೆಡೆ ಘಟನೆಗೆ ಸಂಬಂಧಿಸಿದಂತೆ ಹುಸೈನಬ್ಬ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ, ಸಂಘ ಪರಿವಾರದ ಅಮಾಯಕ ಕಾರ್ಯಕರ್ತರ ಬಂಧನ ಹಿಂಸೆ ವಿರೋಧಿಸಿ ಜೂ. 6 ರಂದು ಉಡುಪಿಯಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಇದೇ ಸಂದರ್ಭದಲಿ ಪ್ರಕರಣ ಒಂದೆರಡು ದಿನಗಳಲ್ಲಿ ಸಿಐಡಿಗೆ ಹಸ್ತಾಂತರವಾಗುವ ಸುಳಿವನ್ನು ಸಂಸದೆ ಶೋಭಾ ನೀಡಿದ್ದಾರೆ
ಪೊಲೀಸ್ ಕಸ್ಟಡಿಯಲ್ಲಿ ವ್ಯಕ್ತಿ ಮೃತಪಟ್ಟರೆ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಬೇಕೆನ್ನುವುದು ಕಾನೂನೂನಲ್ಲಿದೆ. ಹೀಗಾಗಿ ಇನ್ನು ಒಂದೆರಡು ದಿನದಲ್ಲಿ ಪ್ರಕರಣ ಸಿಐಡಿಗೆ ಹಸ್ತಾಂತರವಾಗಬಹುದು ಎಂದಿದ್ದಾರೆ.