ಮಂಗಳೂರು, ಸೆ 25:ಮಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರವಿವಾರ ಮತ್ತು ಸೋಮವಾರ ಸುರಿದ ಧಾರಾಕಾರ ಮಳೆ ಸುರಿದು ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆ ಇನ್ನೂ ನಾಲ್ಕು ದಿನ ಕರ್ನಾಟಕದಾದ್ಯಂತ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಹವಾಮಾನದಲ್ಲಿ ಭಾರೀ ವೈಪರೀತ್ಯ ಉಂಟಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆ ಸುರಿಯುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸುಂದರ್ ಮೇತ್ರಿ ತಿಳಿಸಿದ್ದಾರೆ. ಜಿಲ್ಲೆಯ ಪುತ್ತೂರು , ಬೆಳ್ತಂಗಡಿ,ಸುಳ್ಯ ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗಿದೆ. ಬೆಂಗಳೂರಿನಲ್ಲಿ ಸೋಮವಾರ ಮುಂಜಾನೆಯೇ ವರುಣನ ಆರ್ಭಟ ಬಂಗಾಳಕೊಲ್ಲಿಯ ವಾಯುಭಾರ ಕುಸಿತದಿಂದ ಜನಜೀವನ ತತ್ತರಿಸಿ ಹೋಗಿದೆ.
ಕರಾವಳಿ ಸೇರಿದಂತೆ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳ್ನಾಡಿನ ಜಿಲ್ಲೆಯಲ್ಲಿ ಗುಡುಗು ಸಹಿತ ವಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಕರಾವಳಿಯಲ್ಲಿ ಸೋಮವಾರ ಬೆಳಗ್ಗಿನಿಂದಲೇ ಅಲ್ಲಲ್ಲಿ ಗುಡುಗು ಸಹಿತ ಭಾರಿ ಮಳೆ ಸುರಿಯುತ್ತಿದೆ. ಬಿಸಿ ರೋಡ್ ನಲ್ಲಿ 2 ಮಿಲಿ ಮೀಟರ್ ಮಳೆಯಾಗಿದೆ.