ಜೂ, 05: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಅವರ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪಟಿಯಾಲ್ ಕೋರ್ಟ್ನಿಂದ ಪತಿ ಶಶಿ ತರೂರ್ ಗೆ ಸಮನ್ಸ್ ಜಾರಿ ಮಾಡಲಾಗಿದೆ.
ಕಳೆದ ನಾಲ್ಕು ವರ್ಷಗಳ ಹಿಂದೆ ಅಂದರೆ ಜನವರಿ 17, 2014ರಂದು ಹಿಂದೆ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಪ್ರತಿಷ್ಠಿತ ಹೊಟೇಲ್ವೊಂದರ ಕೊಠಡಿಯಲ್ಲಿ ನಿಗೂಢವಾಗಿ ಮೃತಪಟ್ಟಿದ್ದರು.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿ ಪೊಲೀಸರು ಈ ಹಿಂದೆಯೇ ಶಶಿ ತರೂರ್ ವಿರುದ್ಧ ಆರೋಪಪಟ್ಟಿ ದಾಖಲಿಸಿದ್ದು, ಜುಲೈ 7ರೊಳಗೆ ವಿಚಾರಣೆಗೆ ಹಾಜರಾಗುವಂತೆ ಜೂ ೫ ರಂದು ಸಮನ್ಸ್ ಜಾರಿ ಮಾಡಲಾಗಿದೆ.
ಈ ಪ್ರಕರನದಲ್ಲಿ ಶಶಿ ತರೂರ್ ವಿರುದ್ಧ ಕೌಟುಂಬಿಕ ದೌರ್ಜನ್ಯ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಕೇಸು ದಾಖಲಾಗಿತ್ತು. ಸೆಕ್ಷನ್ 498 ಎ ಹಾಗೂ 306 ಅನ್ವಯ ಈ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸೆಕ್ಷನ್ 498 ಎ ಪ್ರಕಾರ ಗಂಡ ಅಥವಾ ಸಂಬಂಧಿ ಮಹಿಳೆಯೊಂದಿಗೆ ಕ್ರೂರವಾಗಿ ನಡೆದುಕೊಂಡರೆ ದಾಖಲಿಸುವ ಕೇಸ್ ಇದು. ಇನ್ನು ಸೆಕ್ಷನ್ 306 ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಪ್ರಕಣದಲ್ಲಿ ಮೊಕ್ಕದ್ದಮೆ ದಾಖಲಿಸಲಾಗುತ್ತದೆ.