ಬೆಂಗಳೂರು, ಜೂ 07: ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಕೈ ತಪ್ಪಿದರ ಹಿನ್ನಲೆಯಲ್ಲಿ ತೀವ್ರ ಅಸಮಾಧಾನಗೊಂಡಿರುವ ಮಾಜಿ ಸಚಿವ ಎಂ.ಬಿ ಪಾಟೀಲ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಗಳಗಳನೆ ಅತ್ತ ಘಟನೆ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಇನ್ನು ಸಚಿವ ಸಂಪುಟದಲ್ಲಿ ಎಂ ಬಿ ಪಾಟೀಲ್ ಅವರಿಗೆ ಸ್ಥಾನ ಸಿಗದ ಕಾರಣ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆ ಮುಂದೆ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಪಟ್ಟಿಯಲ್ಲಿ ಹೆಸರಿದ್ದರೂ ಕೊನೆಯ ಘಳಿಗೆಯಲ್ಲಿ ನನ್ನನ್ನು ಯಾಕೆ ಕೈಬಿಟ್ಟಿದ್ದಾರೆ, ಸಮಾಜಕ್ಕಾಗಿ, ಪಕ್ಷಕ್ಕಾಗಿ ನಾನು ಶ್ರಮಿಸಿದ್ದೇನೆ, ನನ್ನನ್ನು ಪಕ್ಷ ಕಡೆಗಣಿಸಿದ್ದು ಎಷ್ಟು ಸರಿ ಎಂದು ಭಾವೋದ್ವೇಗಕ್ಕೆ ಒಳಗಾದ ಅವರು ಅಳುತ್ತಲೇ ಕಾವೇರಿಯಿಂದ ಎಂಬಿ ಪಾಟೀಲ್ ತೆರಳಿದ್ದಾರೆ ಎನ್ನಲಾಗಿದೆ.ನೂತನ ಸಚಿವರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲವೆಂದು ಗೊತ್ತಾದ ಕೂಡಲೇ ಎಂ.ಬಿ. ಪಾಟೀಲ್ ಸಾರ್ವಜನಿಕವಾಗಿ ಪಕ್ಷದ ವಿರುದ್ಧ ಆಕ್ರೋಶ ಹೊರಹಾಕಿದ್ದರು.