ಮಂಗಳೂರು, ನ. 24 (DaijiworldNews/SM): ದ.ಕ. ಜಿಲ್ಲೆಯ ಆರೋಗ್ಯ ಇಲಾಖೆಯ ಕೊರೋನಾ ವರದಿ ಪ್ರಕಾರ ಜಿಲ್ಲೆಯಲ್ಲಿ ಮಂಗಳಾವಾರದಂದು 31 ಹೊಸ ಕೊರೋನಾ ವೈರಸ್ ಪ್ರಕರಣಗಳು ದೃಢಪಟ್ಟಿವೆ. ಆ ಮೂಲಕ ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 31,625ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 529 ಮಂದಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ 708 ಮಂದಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ ಇಲ್ಲಿಯ ತನಕ 3,41,486 ಪರೀಕ್ಷೆಗೊಳಪಟ್ಟಿದ್ದಾರೆ. ಈ ಪೈಕಿ 3,10,221 ಮಂದಿಯ ವರದಿ ನೆಗೆಟಿವ್ ಆಗಿದೆ.
ಈ ನಡುವೆ 52 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಈ ಮೂಲಕ ಒಟ್ಟು ಗುಣಮುಖರಾದವ ಸಂಖ್ಯೆ 30,338ಕ್ಕೆ ತಲುಪಿದೆ.