ಮಂಗಳೂರು ಜೂನ್ 07 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಾಂಜಾ ಮಾರಾಟ ಅವ್ಯಾಹತವಾಗಿ ನಡಿತಾ ಇದ್ದು, ಮಂಗಳೂರಿನ ಬಾವುಟಗುಡ್ಡೆಯ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಿಚಾರಣಾಧೀನ ಕೈದಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಓರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ವ್ಯಕ್ತಿಯನ್ನು ಅಂಬ್ಲಮೊಗರುವಿನ ನಿವಾಸಿ ಸಂದೀಪ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ದಸ್ತಗಿರಿ ಮಾಡಿದ ಪೊಲೀಸರು ಆತನಿಂದ 28 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಮಂಗಳೂರು ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.