ಮೂಡುಬಿದಿರೆ, ಜೂ08: ತೋಡಾರು ಗ್ರಾಮದ ಹಂಡೇಲಿನ ಮುಂಡೇಲು ಎಂಬ ಪ್ರದೇಶದಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಕಸಾಯಿಖಾನೆ ಮೇಲೆ ಮೂಡುಬಿದಿರೆ ಪೊಲೀಸರು ದಾಳಿ ನಡೆಸಿದ್ದಾರೆ.
ಅಕ್ರಮ ಕಸಾಯಿಖಾನೆ ಮೇಲೆ ದಾಳಿ ನಡೆಸಿದ ಪೊಲೀಸರು ಮಾಂಸ ಮಾಡಲು ಕಟ್ಟಿ ಹಾಕಿದ್ದ 2 ಕರುಗಳನ್ನು ರಕ್ಷಿಸಿದ್ದಾರೆ. ಮಾತ್ರವಲ್ಲ ಸುಮಾರು 1.38 ಕ್ವಿಂಟಾಲ್ ದನದ ಮಾಂಸವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹಸನ್ ಬಾವಾ ಎಂಬುವವರ ಮನೆಯಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಅದರಂತೆ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ವಿಜಯಪ್ರಸಾದ್ ಮಾರ್ಗದರ್ಶನದಲ್ಲಿ ಪೊಲೀಸ್ ಉಪ ನಿರೀಕ್ಷಕ ದೇಜಪ್ಪ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಹಸನ್ ಬಾವಾ ತಪ್ಪಿಸಿಕೊಂಡಿದ್ದು, ಅಲ್ಲಿಯೇ ಇದ್ದ ಆತನ ಅಣ್ಣನ ಮಗ ಮಹಮ್ಮದ್ ಸಮೀರ್ ಎಂಬಾತನನ್ನು ಬಂಧಿಸಿದ್ದಾರೆ.
2 ದನಗಳ ಒಟ್ಟು 27,000 ಮೌಲ್ಯದ ಮಾಂಸ ಹಾಗೂ ಇತರ ಸಾಧನಗಳನ್ನು ಪೊಲೀಸರು ವಶ ಪಡೆದುಕೊಂಡಿದ್ದಾರೆ.