ಚೆನ್ನೈ, ಜೂ08: ಖಳನಟರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ಕೊಯಮತ್ತೂರು ಬಳಿ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ದುನಿಯಾ ವಿಜಯ್ನನ್ನು ಬಂಧಿಸಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಾಸ್ತಿಗುಡಿ ಚಿತ್ರೀಕರಣದ ವೇಳೆ ನಟರಾದ ಅನಿಲ್ ಹಾಗೂ ಉದಯ್ ದುರಂತ ಸಾವನಪ್ಪಿದ್ದರು. ಈ ಪ್ರಕರಣ ಸಂಬಂಧ ನಿರ್ದೇಶಕನ ಮೇಲೆ ರಾಮನಗರ ಜೆ.ಎಂ.ಎಫ್.ಸಿ ಕೋರ್ಟ್ ನಿಂದ ವಾರೆಂಟ್ ಜಾರಿಯಾಗಿತ್ತು. ಕೋರ್ಟ್ ತೀರ್ಪಿನಂತೆ ನಿರ್ದೇಶಕ ಸುಂದರ್ ಪಿ ಗೌಡ ಅವರನ್ನು ಬಂಧಿಸಲು ಸುಂದರ್ ಮನೆಗೆ ತಡರಾತ್ರಿ ಹೋಗಿದ್ದರು. ಆದರೆ ದುನಿಯಾ ವಿಜಯ್ ಎಂಟ್ರಿ ಕೊಟ್ಟು ಸುಂದರ್ ಬಂಧಿಸದಂತೆ ಪೊಲೀಸರನ್ನ ತಡೆದಿದ್ದರು. ಈ ವೇಳೆ ಸುಂದರ್ ಗೌಡ ಮನೆಯ ಹಿಂಬಾಗಿಲಿನಿಂದ ತಪ್ಪಿಸಿಕೊಂಡಿದ್ದರು.
ಈ ಸಂದರ್ಭ ದುನಿಯಾ ವಿಜಯ್ ತಾವೇ ಸ್ವತಃ ಸುಂದರ್ ಅವರನ್ನು ಠಾಣೆಗೆ ಕರೆತರುವುದಾಗಿ ಪೊಲೀಸರ ಮನವೊಲಿಸುವ ಪ್ರಯತ್ನ ಮಾಡಿದ್ದರು. ಆದರೆ ವಿಜಯ್ ಪೊಲೀಸರಿಗೆ ಕೊಟ್ಟ ಮಾತಿನಂತೆ ನಡೆದುಕೊಂಡಿರಲಿಲ್ಲ.
ಇದೀಗ ರೆಸಾರ್ಟ್ವೊಂದರಲ್ಲಿ ತಲೆಮರೆಸಿಕೊಂಡಿದ್ದ ದುನಿಯಾ ವಿಜಿಯ್ನನ್ನು ಪೊಲೀಸರು ಬಂಧಿಸಿದ್ದಾರೆ.