ಕಾಸರಗೋಡು, ನ. 28 (DaijiworldNews/SM): ಜಿಲ್ಲೆಯಲ್ಲಿ ಮತ್ತೆ ಕೊರೋನಾ ಹೆಚ್ಚಳವಾಗಿದೆ. ಶನಿವಾರ 137 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಇನ್ನು ಶನಿವಾರದಂದು ಜಿಲ್ಲೆಯಲ್ಲಿ 96 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಸೋಂಕಿತರಲ್ಲಿ 128 ಮಂದಿಗೆ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. ಪ್ರಸ್ತುತ 1077 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7896 ಮಂದಿ ನಿಗಾದಲ್ಲಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ 21692 ಮಂದಿಗೆ ಸೋಂಕು ತಗುಲಿದೆ.