ಮಂಗಳೂರು, ಜೂ 10 : 2018ರ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಮಾಜಿ ಸಚಿವ ರಮಾನಾಥ ರೈ ಅವರು ಕಾಸರಗೋಡು ಜಿಲ್ಲೆ ಪ್ರಸಿದ್ಧ ಕಾರಣಿಕ ಕ್ಷೇತ್ರ ಕಾನತ್ತೂರು ಶ್ರೀ ನಾಲ್ವರ್ ದೇವಸ್ಥಾನದ ಮೊರೆ ಹೋಗಿದ್ದಾರೆ. ತಮ್ಮ ಮೇಲೆ ವ್ಯವಸ್ಥಿತವಾದ ಅಪಪ್ರಚಾರವನ್ನು ನಡೆಯುತ್ತಿದ್ದು ಇದನ್ನು ಖಂಡಿಸಿ ಅವರು ನ್ಯಾಯದೇಗುಲ ಎಂದೇ ಚಿರಪರಿಚಿತವಾಗಿರುವ ಕಾನತ್ತೂರು ಶ್ರೀ ನಾಲ್ವರ್ ದೇವಸ್ಥಾನ ಮೊರೆ ಹೋಗಿದ್ದಾರೆ ಎನ್ನಲಾಗಿದೆ.
ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣ ಹಾಗೂ ಕೋಮು ಗಲಭೆಯ ಪ್ರಕರಣಗಳಲ್ಲಿ ಬಿ. ರಮಾನಾಥ ರೈ ಮೇಲೆ ಆರೋಪ ಕೇಳಿಬಂದಿತ್ತು. ಇದೇ ವಿಷಯ ಮುಖ್ಯವಾಗಿ ಮತಗಳ ಧೃವೀಕರಣಕ್ಕೂ ಕಾರಣವಾಗಿತ್ತು. ಈ ಬೆಳವಣಿಗೆಗಳಿಂದ ಮನನೊಂದ ಮಾಜಿ ಸಚಿವ ರಮಾನಾಥ ರೈ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಅವರು ದೈವಸ್ಥಾನಕ್ಕೆ ಭೇಟಿ ನೀಡಿ ದೂರು ಸಲ್ಲಿಸಿದ್ದಾರೆ.
ಮಂಗಳೂರಿನಲ್ಲಿ ನಡೆದ ಕೋಮು ಗಲಭೆಯ ಸ ಹಾಗೂ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣಗಳಲ್ಲಿ ಬಿ. ರಮಾನಾಥ ರೈ ಮೇಲೆ ಯೂ ಆರೋಪ ಕೇಳಿಬಂದಿತ್ತು. ಅಲ್ಲದೇ ಈ ವಿಚಾರ ಮತಗಳ ಧೃವೀಕರಣಕ್ಕೂ ಕಾರಣವಾಗಿತ್ತು. ಈ ಬೆಳವಣಿಗೆಗಳಿಂದ ಮನನೊಂದ ಮಾಜಿ ಸಚಿವ ರಮಾನಾಥ ರೈ ಅವರು ದೈವಸ್ಥಾನಕ್ಕೆ ಭೇಟಿ ನೀಡಿ ದೂರು ನೀಡಿದ್ದಾರೆ.
ಶರತ್ ಹತ್ಯೆ ಪ್ರಕರಣದಲ್ಲಿ ನನ್ನೇನು ಪಾತ್ರವಿಲ್ಲದಿದ್ದರೂ, ರಾಜಕೀಯ ಕಾರಣಗಳಿಗಾಗಿ ಅಪಪ್ರಚಾರ ಮಾಡಿದರು. ಹತ್ಯೆ ಪ್ರಕರಣದಲ್ಲಿ ನಾನು ತಪ್ಪು ಮಾಡಿದ್ರೆ ನನಗೆ ಶಿಕ್ಷೆ ಆಗಲಿ. ಆದರೆ ಪ್ರಕರಣದಲ್ಲಿ ನನ್ನ ಹೆಸರನ್ನು ಅಪಪ್ರಚಾರ ಮಾಡಲಾಗುತ್ತಿದೆ. ಇದರಿಂದ ನನಗೆ ಮಾನಸಿಕವಾಗಿ ತೀವ್ರ ನೋವುಂಟಾಗಿದೆ. ಸುಮ್ಮನೇ ನನ್ನ ಮೇಲೆ ಆರೋಪ ಮಾಡಿದವರನ್ನು ಕರೆದು ವಿಚಾರಣೆ ನಡೆಸಿ ಎಂದು ದೈವಸ್ಥಾನದ ಸನ್ನಿಧಿಯಲ್ಲಿ ವಿನಂತಿ ಮಾಡಿಕೊಂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
2017 ರ ಜುಲೈ 7 ರಂದು ಬಂಟ್ವಾಳದ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಎಂಬವರ ಹತ್ಯೆ ನಡೆದಿತ್ತು. ಈ ಕೊಲೆಯಲ್ಲಿ ಕಾಂಗ್ರೆಸ್ ಮುಖಂಡರ ಕೈವಾಡವಿದೆ ಎಂಬ ಆರೋಪ ಕೇಳಿಬಂದಿತ್ತು.