ಉಜಿರೆ 12: ರಾಜ್ಯಾದ್ಯಂತ ಮುಂದುವರಿದ ಮುಂಗಾರು ಅಬ್ಬರಕ್ಕೆ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತವಾದ ಪರಿಣಾಮ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಇನ್ನು ಕೂಡಾ ಗುಡ್ಡ ಕುಸಿತ ಮುಂದುವರಿದೆ. ಘಾಟ್ನ ರಸ್ತೆಯ 2ನೇ ಮತ್ತು 3ನೇ ತಿರುವಿನಲ್ಲಿ ಮಂಗಳವಾರ ಗುಡ್ಡ ಕುಸಿತವಾಗಿದ್ದು, ಸದ್ಯ ಮಾರ್ಗ ಬದಲಾವಣೆ ಮಾಡಿ ಸಂಚಾರಕ್ಕೆ ಅನುಕೂಲ ಮಾಡಲಾಗಿದೆ. ಆದರೆ ಮಂಗಳೂರಿನಿಂದ ಬೆಂಗಳೂರಿಗೆ ಧರ್ಮಸ್ಥಳ ಹಾಗೂ ಉಜಿರೆಯಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ.
ಸೋಮವಾರ ಸಂಜೆ 7 ಗಂಟೆಗೆ ಸುಮಾರಿಗೆ ಗುಡ್ಡ ಕುಸಿದಿದ್ದು, ಅದೇ ಸ್ಥಿತಿ ಮುಂದುವರಿದೆ. ಎರಡು ಬದಿಗಳಲ್ಲೂ ವಾಹನಗಳು ಕಿ.ಲೋ ಮೀಟರ್ ಗಟ್ಟಲೆ ದೂರ ಸಾಲುಗಟ್ಟಿ ನಿಂತಿವೆ. ಸಾಲು ಗಟ್ಟಿದ ವಾಹನಗಳಲ್ಲಿದ್ದ ಪ್ರಯಾಣಿಕರು , ಆಹಾರಕ್ಕಾಗಿ ಪರದಾಟುತ್ತಿದ್ದು, ಸ್ಥಳೀಯರ ಸಹಕಾರದೊಂದಿಗೆ ಪೊಲೀಸರು ಕೂಡಾ ಮಣ್ಣು ತೆರವಿಗೊಳಿಸಿಲು ಶ್ರಮಿಸುತ್ತಿದ್ದಾರೆ.
ಬೆಂಗಳೂರಿನಿಂದ ಮಂಗಳೂರಿಗೆ ಕೊಟ್ಟಿಗೆಹಾರದಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದ್ದು, ಎಸ್.ಕೆ. ಬಾರ್ಡರ್ ಹಾಗೂ ಕುದುರೆಮುಖ ಮೂಲಕವೂ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಾಣಿ – ಮೈಸೂರು ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಲಾಗಿದ್ದು, ರಾತ್ರಿಯಿಡಿ ಸಿಬ್ಬಂದಿ ಮಣ್ಣು ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.