ಮಂಗಳೂರು, ಡಿ. 14 (DaijiworldNews/SM): ದಕ್ಷಿಣ ಕನ್ನಡ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಸೋಮವಾರ 22 ಹೊಸ ಕರೋನಾವೈರಸ್ ಪ್ರಕರಣಗಳು ಪತ್ತೆಯಾಗಿದ್ದು ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 32,383ಕ್ಕೆ ಏರಿಕೆಯಾಗಿವೆ. ಈ ಪೈಕಿ 404 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಜಿಲ್ಲೆಯಲ್ಲಿ ಒಟ್ಟು 4,02,670 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 3,70,287 ನೆಗೆಟಿವ್ ಆಗಿದೆ. ಸೋಮವಾರ 48 ಮಂದಿ ಗುಣಮುಖರಾಗಿದ್ದು ಆ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 31,248 ಕ್ಕೆ ಏರಿಕೆಯಾಗಿದೆ. ಈವರೆಗೆ ಒಟ್ಟು 731 ಸಾವುಗಳು ಸಂಭವಿಸಿವೆ.
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಸೋಮವಾರ 12 ಹೊಸ ಪ್ರಕರಣಗಳು ಸೇರಿದಂತೆ ಜಿಲ್ಲೆಯ ಕರೋನಾ ವೈರಸ್ ಸಂಖ್ಯೆ 22,907 ಕ್ಕೆ ಏರಿಕೆಯಾಗಿದೆ. ಈ ಪೈಕಿ 134 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಇಲ್ಲಿಯವರೆಗೆ 2,66,115ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 2,43,208 ಮಾದರಿಗಳು ನೆಗೆಟಿವ್ ಆಗಿದೆ. ಸೋಮವಾರ 13 ರೋಗಿಗಳನ್ನು ಬಿಡುಗಡೆ ಮಾಡಲಾಗಿದ್ದು, ಆ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 22,586 ಕ್ಕೆ ಏರಿಕೆಯಾಗಿದೆ.
ಈವರೆಗೆ ಜಿಲ್ಲೆಯಲ್ಲಿ ಒಟ್ಟು 187 ಸಾವುಗಳು ಸಂಭವಿಸಿವೆ.