ಪುತ್ತೂರು, ಡಿ.15 (DaijiworldNews/MB) : ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿ ಕಬಕ ಸಮೀಪದ ಪೋಳ್ಯ ಎಂಬಲ್ಲಿ ಡಿ.15ರ ಮಂಗಳವಾರ ನಸುಕಿನಲ್ಲಿ ನಡೆದ ಹಿಟ್ ಆಂಡ್ ರನ್ ಪ್ರಕರಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.
ಮೃತರನ್ನು ಬೈಕ್ ಸವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ, ಬಂಟ್ವಾಳ ನಿವಾಸಿ ವೆಂಕಟ್ರಮಣ ಹೊಳ್ಳ ಎಂದು ಗುರುತಿಸಲಾಗಿದೆ.
ನಿನ್ನೆ ರಾತ್ರಿ ಪಂಚವಟಿ ರಾ.ಸ್ವ.ಸೇ. ಕೇಂದ್ರದಲ್ಲಿ ತಂಗಿದ್ದ ವೆಂಕಟ್ರಮಣ ನಸುಕಿನ ಜಾವ ಮನೆಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.
ವೆಂಕಟ್ರಮಣ ಹೊಳ್ಳ ಅವರ ಮೃತ ದೇಹ ಘಟನೆಯ ತುಸು ದೂರ ಬಿದ್ದಿದ್ದು ಅವರ ತಲೆ ಜಜ್ಜಿ ಹೋಗಿದೆ. ವೆಂಕಟ್ರಮಣ ಹೊಳ್ಳ ಅವರು ಚಲಾಯಿಸುತ್ತಿದ್ದ ಬೈಕ್ಗೆ ಬೇರೆ ಯಾವುದೋ ವಾಹನ ಡಿಕ್ಕಿಯಾಗಿ ಹೋಗಿರಬಹುದೇ ಎಂಬ ಶಂಕೆಯು ವ್ಯಕ್ತವಾಗುತ್ತಿದೆ. ಪುತ್ತೂರು ನಗರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಅಪಘಾತದ ಬಗ್ಗೆ ಸಿಸಿ ಕ್ಯಾಮರಾ ಫೂಟೇಜ್ ಕಲೆ ಹಾಕಲಾಗುತ್ತಿದೆ ಎಂದು ತಿಳಿದು ಬಂದಿದೆ.