ಮಂಗಳೂರು, ಡಿ.16 (DaijiworldNews/MB) : ಯುವಕನ ಮೇಲೆ ತಲವಾರು ದಾಳಿ ನಡೆಸಿ ತಂಡವೊಂದು ಕೊಲೆ ಯತ್ನ ನಡೆಸಿದ ಘಟನೆ ಅಡ್ಡೂರಿನಲ್ಲಿ ನಡೆದಿದೆ.
ತಲವಾರು ದಾಳಿಗೆ ಒಳಗಾದ ಯುವಕನನ್ನು ಅಡ್ಡೂರು ನಿವಾಸಿ ಮಹಮ್ಮದ್ ತಾಜುದ್ದೀನ್ ಎಂದು ಗುರುತಿಸಲಾಗಿದೆ.
ಯುವಕ ಅಡ್ಡೂರಿನಿಂದ ಮನೆ ಕಡೆ ತೆರಳುವ ವೇಳೆ ಮೂರು ಮಂದಿಯ ತಂಡ ತಾಜುದ್ದೀನ್ ಮೇಲೆ ತಲವಾರು ದಾಳಿ ನಡೆಸಿ ಕೊಲೆ ಯತ್ನ ಮಾಡಿದ್ದಾರೆ ಎಂದು ಹೇಳಲಾಗಿದೆ. ಈ ದಾಳಿಯು ಫರ್ವೀಝ್ ಹಾಗೂ ತಂಡದಿಂದ ನಡೆದಿದೆ ಎಂದು ಶಂಕಿಸಲಾಗಿದೆ.
ದಾಳಿಯಿಂದ ಗಾಯಗೊಂಡಿರುವ ಯುವಕನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಈ ಬಗ್ಗೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.