ರಾಜ್ಯ ಹೈಕೋರ್ಟ್ ಹಿರಿಯ ನ್ಯಾಯಮೂರ್ತಿ ಜಯಂತ್ ಪಟೇಲ್ ರಾಜೀನಾಮೆ ನೀಡಿದ್ದಾರೆ.ಸೋಮವಾರ ಮುಖ್ಯ ನ್ಯಾಯಮೂರ್ತಿ ಎಸ್.ಕೆ ಮುಖರ್ಜಿ ಅವರಿಗೆ ತಮ್ಮ ರಾಜೀನಾಮೆ ಪತ್ರ ಕಳುಹಿಸಿಕೊಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.ನ್ಯಾ. ಜಯಂತ್ ಪಟೇಲ್ ಅವರ ನಿವೃತ್ತಿ 2018 ಕ್ಕೆ ಕೊನೆಯಾಗಲಿದ್ದು. ಅಚ್ಚರಿಯ ಬೆಳವಣಿಗೆಗಳಲ್ಲಿ ರಾಜೀನಾಮೆ ಸಲ್ಲಿಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. 1979ರಲ್ಲಿ ಗುಜರಾತಿನ ರಾಜ್ ಕೋಟ್ ನ ಜಿಲ್ಲಾ ನ್ಯಾಯಾಲಯದಲ್ಲಿ ವಕೀಲ ವೃತ್ತಿ ಪ್ರಾರಂಭಿಸಿದ್ದ ಅವರು 2001ರ ಡಿಸೆಂಬರ್ 3ರಂದು ಹೈಕೋರ್ಟ್ ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದರು.