ಬೆಂಗಳೂರು, ಜೂ 27 : ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿ ಕೆ.ಟಿ.ನವೀನ್ ಕುಮಾರ್ ವಿರುದ್ಧ ಎಸ್ಐಟಿ ಬಳಿ ಯಾವುದೇ ರೀತಿಯ ಸೂಕ್ತ ಸಾಕ್ಷ್ಯಾಧಾರಗಳಿಲ್ಲ ಎಂದು ಆರೋಪಿ ಪರ ವಕೀಲ ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.
ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನವೀನ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ಕುರಿತಂತೆ ವಿಚಾರಣೆ ನಡೆಸಿದ ಸಂದರ್ಭ ಜೂ ೨೬ ರಂದು ವಾದ ಮಂಡಿಸಿರುವ ಆರೋಪಿ ಪರ ವಕೀಲ ವೇದಮೂರ್ತಿಯವರು, ಎಸ್ಐಟಿ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಹಲವು ದೋಷಗಳಿವೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಎಸ್ಐಟಿ ಬಳಿ ಹೇಳಿಕೆ ನೀಡಿರುವ ದಾಖಲಿಸಿದ ವ್ಯಕ್ತಿಯೂ ನವೀನ್ ಕುಮಾರ್'ಗೆ ರೂ.3,000 ಸಾವಿರಕ್ಕೆ ಬುಲೆಟ್ ಗಳನ್ನು ಮಾರಾಟ ಮಾಡಲಾಗಿತ್ತು ಎಂದು ಹೇಳಿದ್ದಾರೆ. ಆದರೆ, ಸಾಕ್ಷ್ಯಾಧಾರಿಗಳು ನೀಡಿರುವ ಹೇಳಿಕೆ ಪ್ರಕಾರ ಬುಲೆಟ್ ಗಳನ್ನು ರೂ.20,000ಕ್ಕೆ ಮಾರಾಟ ಮಾಡಲಾಗಿದೆ ಎಂದು ಹೇಳಲಾಗಿದೆ.
ಇನ್ನು ನವೀನ್ ಕುಮಾರ್ ಮಂಪರು ಪರೀಕ್ಷೆಗೆ ಒಳಪಡಿಸುವಾಗಲೂ ಸರಿಯಾದ ಮಾಹಿತಿಯನ್ನು ಅಧಿಕಾರಿಗಳು ನೀಡಿಲ್ಲ. ಗುಜರಾತ್ ನಲ್ಲಿ ಮಂಪರು ಪರೀಕ್ಷೆ ನಡೆಸಲಾಗುತ್ತಿದೆ ಎನ್ನಲಾಗಿತ್ತು ಬಿಟ್ಟರೆ ಸೂಕ್ತ ಮಾಹಿತಿ ಒದಗಿಸಿಲ್ಲ. ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಟ್ಟಿದ್ದ ಫೀಸಿನ ದಾಖಲಾತಿಗಳನ್ನು ಎಸ್ಐಟಿ ಒದಗಿಸಿಲ್ಲ. ಎಸ್ಐಟಿ ದಾಖಲು ಮಾಡಿಕೊಂಡಿರುವ ಮೊಬೈಲ್ ನಂಬರ್ ಕಾಲ್ ಡೀಟೆಲ್ಸ್ ಕೂಡ ನಮ್ಮ ಕಕ್ಷಿದಾರರಿಗೆ ಸಂಬಂಧಿಸಿದ್ದಲ್ಲ ಎಂದು ತಿಳಿಸಿದ್ದಾರೆ. ಈ ಸಂದರ್ಭ ವಾದ ಆಲಿಸಿದ ನ್ಯಾಯಾಲಯ ಪ್ರತಿಕ್ರಿಯೆ ನೀಡಿದ ಈ ತೆರನಾದ ಬೆಳವಣಿಗೆಗಳು ನಡೆಯುತ್ತಿದ್ದರೂ ನ್ಯಾಯಾಲಯದ ಗಮನಕ್ಕೆ ಏಕೆ ತರಲಿಲ್ಲ ಎಂದು ಪ್ರಶ್ನಿಸಿತು. ಬಳಿಕ ಆರೋಪಿ ಮಂಪರು ಪರೀಕ್ಷೆಗೆ ತಯಾರಿದ್ದರೆ ಎಂದು ಪ್ರಶ್ನಿಸಿದೆ. ಇದಕ್ಕೆ ಉತ್ತರಿಸಿದ ಉತ್ತರಿಸಿರುವ ಆರೋಪಿ ಪರ ವಕೀಲರು, ನವೀನ್ ಕುಮಾರ್ ನೊಂದಿಗೆ ಮಾತುಕತೆ ನಡೆಸಿದ ಬಳಿಕ ಈ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ವಾದ-ಪ್ರತಿವಾದಗಳ ಬಳಿ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ.