ಕುಂದಾಪುರ, ಜು 04 : ಮಧ್ಯ ಪ್ರದೇಶದಲ್ಲಿ ನಡೆದಿದ್ದ 8 ವರ್ಷದ ಬಾಲಕಿ ದಿವ್ಯ ಮೇಲಿನ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಇಂದು ಕುಂದಾಪುರದಲ್ಲಿ ಎ.ಬಿ.ವಿ.ಪಿ ವತಿಯಿಂದ ಪ್ರತಿಭಟನೆ ನಡೆದಿದೆ. ಎಬಿವಿಪಿ, ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜು, ಬಿ.ಬಿ ಹೆಗ್ಡೆ ಕಾಲೇಜು ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಸರಕಾರದ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದರು.
ಇದೇ ವೇಳೆ ಮಾತನಾಡಿದ ವಿದ್ಯಾರ್ಥಿಗಳು, ಆರೋಪಿಗಳಿಗೆ ಕಠಿಣ ಶಿಕ್ಷೆ ಮತ್ತು ಸಂತ್ರಸ್ತ ಬಾಲಕಿ ದಿವ್ಯ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿದರು. ಕುಂದಾಪುರದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಸಾಗಿದ ವಿದ್ಯಾರ್ಥಿಗಳು, ಕುಂದಾಪುರದ ಮಿನಿ ವಿಧಾನ ಸೌಧದ ಎದುರು ಪ್ರತಿಭಟನೆ ನಡೆಸಿದರು. ಬಳಿಕ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ತಹಶಿಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ವೇಳೆ ಎ.ಬಿ.ವಿ.ಪಿಯ ಆಲ್ ಕಾಲೇಜ್ ಯುನಿಯಮ್ನ ಕಾರ್ಯದರ್ಶಿ ಸುಕೇಶ್ ಪೂಜಾರಿ, ರೋಶನ್ ಪೂಜಾರಿ, ಕಾರ್ತಿಕ್ ಪ್ರಭು, ಗುರುರಾಜ್ ಖಾರ್ವಿ, ವಿನೋದ್ ಸೇರಿದಂತೆ ಸಾವಿರಾರು ವಿದ್ಯಾಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ರು.