ಬೆಂಗಳೂರು, ಜು 04 :ಕರ್ನಾಟಕ ಪ್ರದೇಶ ಕಾಂಗ್ರೆಸ್ (ಕೆಪಿಸಿಸಿ) ಅಧ್ಯಕ್ಷರಾಗಿ ದಿನೇಶ್ ಗುಂಡುರಾವ್ ಅವರನ್ನು ನೇಮಕಗೊಳಿಸಿ ಎಐಸಿಸಿ ಅಧಿಕೃತ ಘೋಷಣೆ ಹೊರಡಿಸಿದೆ. ಈ ಬಾರಿಯ ಲೋಕಸಭಾ ಚುನಾವಣೆ ಉಸ್ತುವಾರಿಯನ್ನು ಯುವಕರಿಗೆ ನೀಡುವ ಸಲುವಾಗಿ ದಿನೇಶ್ ಗುಂಡುರಾವ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಕಾಂಗ್ರೆಸ್ ಹೈಕಮಾಂಡ್ ನೀಡಲಾಗಿದೆ ಎನ್ನಲಾಗಿದೆ.ಈಶ್ವರ ಖಂಡ್ರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ನೀಡುವ ಮೂಲಕ ಉತ್ತರ ಕರ್ನಾಟಕ ಮತ್ತು ಲಿಂಗಾಯತ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಲವು ಮಂದಿ ಲಾಭಿ ನಡೆಸಿದ್ದರು. ಆದರೆ ಅವರೆಲ್ಲರ ಲಾಭಿಯನ್ನು ಮೀರಿಸಿ ದಿನೇಶ್ ಗುಂಡುರಾವ್ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡುರಾವ್ ಅವರ ಜತೆಗೆ ಸಾಕಷ್ಟು ನಾಯಕರ ಹೆಸರುಗಳು ಕೇಳಿ ಬಂದಿದ್ದವು.