ಮಂಗಳೂರು, ಜು 05 : ಜು 05 ರಂದು ನಡೆಯಲಿರುವ ರಾಜ್ಯದ ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡನೆಗೆ ಯಾವುದೇ ಅಡೆತಡೆ ರಾಜ್ಯದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಯಶಸ್ವಿಯಾಗಿ ಮಂಡಿಸಲಿ ಎಂದು. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾದಳ ವತಿಯಿಂದ ಕದ್ರಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಸನ್ನಿಧಿಯಲ್ಲಿ ಏಕರುದ್ರಾಭಿಷೇಕ ಪೂಜೆಯನ್ನು ನೆರವೇರಿಸಲಾಯಿತು.
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ವಸಂತ ಪೂಜಾರಿ ಹಾಗೂ ಜಿಲ್ಲೆಯ ನಾಯಕರ ಸಮ್ಮುಖದಲ್ಲಿ ನಡೆದ ಪೂಜೆಯ ಬಳಿಕ ಮಾತನಾಡಿದ ಮಾಜಿ ಸಚಿವ ಕೆ ಅಮರನಾಥ ಶೆಟ್ಟಿ ರಾಜ್ಯದ ಬಡವರ ರೈತರ ಪರ ಕಾಳಜಿಯುಳ್ಳ ಮುಖ್ಯಮಂತ್ರಿ ಎಂದರೆ ಅದು ಎಚ್ ಡಿ ಕುಮಾರಸ್ವಾಮಿ ಅವರು ಈ ನಿಟ್ಟಿನಲ್ಲಿ ಯಶಸ್ವಿಯಾಗಿ ಬಜೆಟ್ ಮಂಡನೆಯಾಗಲಿದೆ ಎಂದು ಹಾರೈಸಿದರು.
ಇದೇ ಸಂದರ್ಭದಲ್ಲಿ ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಎಂ ಬಿ ಸದಾಶಿವ, ಜೆಡಿಎಸ್ ನಾಯಕರುಗಳಾದ ರಾಮ್ ಗಣೇಶ್ ,ಸುಶೀಲ್ ನೋರೋನ, ಗೋಪಾಲಕೃಷ್ಣ ಅತ್ತಾವರ,ಪುಷ್ಪರಾಜನ್, ಗಂಗಾಧರ್ ಉಳ್ಳಾಲ್, ದಿವಾಕರ್ ಶೆಟ್ಟಿ ತೋಡಾರ್,ಅಕ್ಷಿತ್ ಸುವರ್ಣ ಮುಂತಾದವರು ಉಪಸ್ಥಿತರಿದ್ದರು.