ಬೆಂಗಳೂರು, ಜು10: ಜಿ ಉನ್ನತ ಶಿಕ್ಷಣ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಬಿ.ಎ. ಮೊಹಿದಿನ್ (81) ಅವರು ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಂಗಳೂರಿನಲ್ಲಿ ಮೊಹಿದಿನ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಇಡಲಾಗಿದ್ದು, ವಿಧಾನಸಭೆಯ ಸ್ಪೀಕರ್ ರಮೇಶ್ ಕುಮಾರ್, ಮೊಹಿದಿನ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನದ ಬಳಿಕ , ತನ್ನ ಆತ್ಮೀಯ ಸ್ನೇಹಿತನನ್ನು ನೆನೆದು ಬಿಕ್ಕಿಬಿಕ್ಕಿ ಅತ್ತ ಘಟನೆ ನಡೆದಿದೆ.
ಮೊಹಿದಿನ್ ಪಾರ್ಥಿವ ಶರೀರವನ್ನು ಬೆಂಗಳೂರಿನ ಸಂಜಯ ನಗರದಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕಾಗಿ ಇಡಲಾಗಿದೆ. ಹಲವು ರಾಜಕೀಯ ಧುರೀಣರು ಅಂತಿಮ ದರ್ಶನ ಪಡೆಯುತ್ತಿದ್ದು, ಸಂಜೆ ವೇಳೆಗೆ ಮಂಗಳೂರು ಸಮೀಪದ ಬಜ್ಪೆಯಲ್ಲಿರುವ ಅವರ ಸ್ವಗೃಹಕ್ಕೆ ಮೃತದೇಹ ತರಲಾಗುವುದು. ಬಳಿಕ ಬಜ್ಪೆಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.