ಕುಂದಾಪುರ, ಜು 11: ಭಾರೀ ಗಾಳಿ ಮಳೆಯಿಂದಾಗಿ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋಳಂಬಳ್ಳಿ ಎಂಬಲ್ಲಿ ಮನೆ ಕುಸಿದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಮನೆಯವರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.
ಮನೆಯವರಾದ ನೇಮಿರಾಜ್ ಜೈನ್, ಭವಾನಿ, ವಜ್ರಕುಮಾರ್, ದೀಪ ಹಾಗೂ ಶ್ರೇಷ್ಠ ಎಂಬವರು ಅಪಾಯದಿಂದ ಪಾರದವರು. ಅವರು ಕೆಲಸದ ನಿಮಿತ್ತ ಹೊರಗಡೆ ತೆರಳಿದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಸ್ಥಳಕ್ಕೆ ಗ್ರಾಮಕರಣಿಕ ಶಿವಾನಂದ, ಪಂಚಾಯತ್ ಅಧ್ಯಕ್ಷರಾದ ಅಣ್ಣಪ್ಪ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಬೈಂದೂರು ಶಾಸಕರಾದ ಸುಕುಮಾರ್ ಶೆಟ್ಟಿಯವರು ಸಮಸ್ಯೆಗೆ ಸ್ಪಂದಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳಕ್ಕೆ ಭೇಟಿ ನೀಡಿ ವರದಿ ನೀಡುವಂತೆ ಸೂಚನೆಯನ್ನು ನೀಡಿದ್ದಾರೆ.