ಉಡುಪಿ, ಜು 12: ಪೆರ್ಡೂರು ಗ್ರಾಮದ ಶೇನರಬೆಟ್ಟು ಎಂಬಲ್ಲಿ ಮೇ 29ರಂದುಅಸಹಜವಾಗಿ ಸಾವಿಗೀಡಾಗಿದ್ದ ಮಂಗಳೂರಿನ ಜೋಕಟ್ಟೆ ನಿವಾಸಿ 62 ವರ್ಷದ ಹುಸೈನಬ್ಬ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿರುವ ಎಸ್ ಐ ಸಹಿತ 9 ಆರೋಪಿಗಳ ನ್ಯಾಯಾಂಗ ಬಂಧನ ಜು. 24 ರ ವರೆಗೆ ವಿಸ್ತರಣೆಯಾಗಿದೆ.
ಉಡುಪಿಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಬುಧವಾರ ನಡೆದ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರವಾರದ ಕಾರಾಗೃಹದಲ್ಲಿರುವ ಆರೋಪಿಗಳ ವಿಚಾರಣೆ ನಡೆಸಿದ ನ್ಯಾಯಾಧೀಶರು ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ. ಇನ್ನು ಪ್ರಕರಣದಲ್ಲಿ ಬಂಧಿತ ಆರೋಪಿ ದೀಪಕ್ ಹೆಗ್ಡೆ ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆಯನ್ನು ಉಡುಪಿ ಜಿಲ್ಲಾ ಪ್ರಧಾನ ನ್ಯಾಯಲಯ ಜು.13 ಕ್ಕೆ ಮುಂದೂಡಿದೆ