ಮಂಗಳೂರು, ಜು 12: ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಬಳಿಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರು ಪಿಂಪ್ ಗಳನ್ನು ಬಂಧಿಸಿದ್ದಾರೆ.
ವೇಶ್ಯಾವಾಟಿಕೆಯಲ್ಲಿ ನಿರತರಾಗಿದ್ದ ಸಜಿತ್ ಶೇಖರ್ ಹಾಗೂ ಮಹಿಳಾ ಪಿಂಪ್ ಒಬ್ಬಾಕೆಯನ್ನು ವಶಕ್ಕೆ ಪಡೆದುಕೊಂಡು ಅವರ ಬಳಿ ಇದ್ದ 5 ಮೊಬೈಲ್ ಫೋನ್ ಗಳನ್ನು ಹಾಗೂ ನಗದು 15,240 ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ಸಜಿತ್ ಶೇಖರ್, ಮನೆಯನ್ನು ಬಾಡಿಗೆಗೆ ಪಡೆದು ಮಹಿಳಾ ಪಿಂಪ್ ಜೊತೆ ಯುವತಿಯರನ್ನು ಈ ಮನೆಯಲ್ಲಿ ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆಗೆ ಬಳಸಿಕೊಂಡು ಹಣವನ್ನು ಗಳಿಸುತ್ತಿದ್ದ ಎಂದು ತಿಳಿದುಬಂದಿದೆ. ಇನ್ನು ಸಿಸಿಬಿ ಪೊಲೀಸರು ಇಬ್ಬರು ನೊಂದ ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. ಈ ಕೃತ್ಯದಲ್ಲಿ ಭಾಗಿಯಾದ 2 ಮಂದಿ ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಕಾವೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.