ಮೂಡುಬಿದಿರೆ, ಜು 12: ಕೋಮು ಪ್ರಚೋದನಕಾರಿ ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿ, ವ್ಯಕ್ತಿಯೋರ್ವರಿಗೆ ಕೊಲೆ ಬೆದರಿಕೆಯೊಡ್ಡಿದ ಆರೋಪಿ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಸುಳ್ಯ ತಾಲೂಕಿನ ಇಬ್ರಾಹಿಂ ಖಲೀಲ್ ಎಂಬಾತ ದುಬೈನ ಅಬುದಾಬಿಯಲ್ಲಿ ನೆಲೆಸಿದ್ದು, ಹಲವು ನಕಲಿ ಫೇಸ್ಬುಕ್ ಖಾತೆ ತೆರೆದು ಕೋಮು ಪ್ರಚೋದನಕಾರಿ ಸಂದೇಶ ರವಾನಿಸುತ್ತಿದ್ದ. ಖಲೀಲ್, ವ್ಯಾಪಾರಿ ಅಬ್ದುಲ್ ಲತೀಫ್ ಎಂಬವರಿಗೆ ಬೆದರಿಕೆಯೊಡ್ಡಿದ್ದು, ಆರೋಪಿಯ ವಿರುದ್ಧ ಲತೀಫ್ ಸೈಬರ್ ಕ್ರೈಂ ಪೊಲೀಸರಿಗೆ ಹಾಗೂ ಮೂಡುಬಿದಿರೆ ಠಾಣೆಗೆ ದೂರು ನೀಡಿದ್ದಾರೆ.